ಭದ್ರಾವತಿ: ನಿಷೇಧಾಜ್ಞೆಯ ಮಧ್ಯೆಯೂ ಯುವಕನ ಮೇಲೆ ಹಲ್ಲೆ

posted in: ರಾಜ್ಯ | 0

ಶಿವಮೊಗ್ಗ: ಫ್ಲೆಕ್ಸ್‌ ವಿಚಾರಕ್ಕೆ ಶಿವಮೊಗ್ಗದಲ್ಲಿ ನಡೆದ ಗಲಾಟೆಯ ನಂತರ ಈಗ ಭದ್ರಾವತಿಯಲ್ಲೂ ಹಲ್ಲೆ ಪ್ರಕರಣ ನಡೆದ ಬಗ್ಗೆ ವರದಿಯಾಗಿದೆ. ನಿಷೇಧಾಜ್ಞೆಯ ನಡುವೆಯೂ ಭದ್ರಾವತಿಯ ನಗರದ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚಾಕು ಇರಿತಕ್ಕೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.
ಸುನೀಲ್​ (27) ಎಂಬವರ ಮೇಲೆ ಇಂದು, ಮಂಗಳವಾರ ಬೆಳಗ್ಗೆ ಭದ್ರಾವತಿಯಲ್ಲಿ ಏಕಾಏಕಿ ಹಲ್ಲೆ ಮಾಡಿದ್ದಾರೆ. ಇಂದು ಬೆಳಗ್ಗೆ 8:30ರ ವೇಳೆಗೆ ಭದ್ರಾವತಿಯ ನೆಹರು ನಗರದಲ್ಲಿ ಹಲ್ಲೆ ನಡೆಸಲಾದೆ ಎಂದು ಹೇಳಲಾಗಿದ್ದು, ಸುನಿಲ್ ಸ್ವಲ್ಪದರಲ್ಲಿಯೇ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೊಳಗಾದ ಸುನೀಲ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂದಿನಂತೆ ನೆಹರು ನಗರದ ಸುನೀಲ್​ ಇಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಈ ಸಮಯದಲ್ಲಿ ಅವರ ಮೇಲೆ ಹಲ್ಲೆ ನಡೆದಿದೆ. ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಅಕ್ಟೋಬರ್‌ 4ರಂದು ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮನ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement