ಕಾಶ್ಮೀರದಲ್ಲಿ ಇಬ್ಬರು ಕಾಶ್ಮೀರಿ ಹಿಂದುಗಳ ಮೇಲೆ ಉಗ್ರರ ಗುಂಡಿನ ದಾಳಿ: ಓರ್ವ ಸಾವು

ಶ್ರೀನಗರ: ಶೋಪಿಯಾನ್‌ನ ಕುಗ್ರಾಮವಾದ ಚೋಟಿಗಂನಲ್ಲಿ ಇಬ್ಬರು ಕಾಶ್ಮೀರಿ ಪಂಡಿತ ಸಮುದಾಯದ ಸಹೋದರರ ಮೇಲೆ ಭಯೋತ್ಪಾಕರು ಗುಂಡು ಹಾರಿಸಿದ್ದು, ಈರ್ವ ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ
ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ ಹಾಗೂ ಗಾಯಗೊಂಡ ವ್ಯಕ್ತಿಯನ್ನು ಪಿಂಟೂ ಕುಮಾರ್ ಎಂದು ತಿಳಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರ ಪೊಲೀಸ್ ವಲಯ ಟ್ವಿಟರ್‌ನಲ್ಲಿ ಈ ವಿಷಯ ತಿಳಿಸಿದ್ದು, “ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ಗುಂಡು ಹಾರಿಸಿದ್ದಾರೆ. ಅವರಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ. ಇಬ್ಬರೂ ಕಾಶ್ಮೀರದ ಅಲ್ಪಸಂಖ್ಯಾತ ಸಮುದಾಯದವರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಹೇಳಿದೆ.

ಕಾಶ್ಮೀರದಲ್ಲಿ ಟಾರ್ಗೆಟ್‌ ಹತ್ಯೆಗಳು
ಮೇ 12 ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭಯೋತ್ಪಾದಕರು ರಾಹುಲ್ ಭಟ್ ಎಂಬ ಸರ್ಕಾರಿ ನೌಕರನನ್ನು ಹತ್ಯೆ ಮಾಡಿದ ನಂತರ, 2012 ರಲ್ಲಿ ಪ್ರಧಾನಿ ಪ್ಯಾಕೇಜ್ ಅಡಿಯಲ್ಲಿ ತೊಡಗಿಸಿಕೊಂಡಿದ್ದ ಹಲವಾರು ಕಾಶ್ಮೀರಿ ಪಂಡಿತರು ಕಣಿವೆಯಲ್ಲಿ ತಮ್ಮ ಸುರಕ್ಷತೆಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ.
ಜೂನ್ 2 ರಂದು, ಕಾಶ್ಮೀರದಲ್ಲಿ ಇಬ್ಬರು ಜನರನ್ನು ಕೊಲ್ಲಲಾಯಿತು. ಅವರಲ್ಲಿ ಬ್ಯಾಂಕ್ ಉದ್ಯೋಗಿ ಮತ್ತು ಇಟ್ಟಿಗೆ ಗೂಡು ಕಾರ್ಮಿಕರಾಗಿದ್ದಾರೆ. ಮ

ಪ್ರಮುಖ ಸುದ್ದಿ :-   ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

ಮೇ 31 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರು ಜಮ್ಮುವಿನ ಸಾಂಬಾ ಜಿಲ್ಲೆಯ ಮಹಿಳಾ ಶಿಕ್ಷಕಿಯನ್ನು ಕೊಂದರು. ಮೇ 18 ರಂದು ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ವೈನ್ ಶಾಪ್‌ಗೆ ಭಯೋತ್ಪಾದಕರು ದಾಳಿ ಮಾಡಿ ಗ್ರೆನೇಡ್ ಎಸೆದರು, ಜಮ್ಮು ನಿವಾಸಿಯೊಬ್ಬರು ಸಾವಿಗೀಡಾದರು ಮತ್ತು ಮೂವರು ಗಾಯಗೊಂಡರು.
ಮೇ 24 ರಂದು ಪೊಲೀಸ್ ಅಧಿಕಾರಿ ಸೈಫುಲ್ಲಾ ಖಾದ್ರಿಯನ್ನು ಶ್ರೀನಗರದ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು, ಟಿವಿ ಕಲಾವಿದೆ ಅಮ್ರೀನ್ ಭಟ್ ಎರಡು ದಿನಗಳ ನಂತರ ಬುದ್ಗಾಮ್‌ನಲ್ಲಿ ಕೊಲ್ಲಲ್ಪಟ್ಟರು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement