ಶಿಕ್ಷಕನ ಥಳಿತದಿಂದ ರಾಜಸ್ಥಾನ ದಲಿತ ಬಾಲಕನ ಸಾವು: ಕೋಲಾಹಲದ ನಡುವೆ 12 ಕಾಂಗ್ರೆಸ್ ಕೌನ್ಸಿಲರ್‌ಗಳು ರಾಜೀನಾಮೆ

ಜೈಪುರ: ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಕುಡಿಯುವ ನೀರಿನ ಮಡಕೆಯನ್ನು ಮುಟ್ಟಿದ ಆರೋಪದಲ್ಲಿ ಶಿಕ್ಷಕನಿಂದ ಥಳಿಸಲ್ಪಟ್ಟ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿಯ ಸಾವಿನ ನಂತರ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪಕ್ಷದ ಶಾಸಕ ಪನಾ ಚಂದ್ ಮೇಘವಾಲ್‌ ನೀಡಿದ್ದ ರಾಜೀನಾಮೆ ಬೆಂಬಲಿಸಿ ಬರಾನ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ 12 ಕಾಂಗ್ರೆಸ್ ಕೌನ್ಸಿಲರ್‌ಗಳು ಮಂಗಳವಾರ (ಆಗಸ್ಟ್ 16) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ರಾಜೀನಾಮೆ ಕಳುಹಿಸಿದ್ದಾರೆ.
ಘಟನೆಯ ಎರಡು ದಿನಗಳ ನಂತರ ಬರನ್-ಅಟ್ರು ಶಾಸಕರು ಸೋಮವಾರ ಗೆಹ್ಲೋಟ್‌ಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಏತನ್ಮಧ್ಯೆ, ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ ಮಂಗಳವಾರ ಒಂಬತ್ತು ವರ್ಷದ ಮಗುವಿನ ಕುಟುಂಬಕ್ಕೆ 20 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಪಕ್ಷದಿಂದ ಹಣ ನೀಡಲಾಗುವುದು ಎಂದು ದೋತಾಸ್ರಾ ತಿಳಿಸಿದ್ದಾರೆ.
ಹಲವಾರು ರಾಜಕಾರಣಿಗಳು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಮಂಗಳವಾರ “ಸ್ವಾತಂತ್ರ್ಯದ ನಂತರ 75 ವರ್ಷಗಳ ನಂತರ ಜಾತಿ ವ್ಯವಸ್ಥೆಯು ದೊಡ್ಡ ಶತ್ರುವಾಗಿ ಉಳಿದಿದೆ” ಎಂದು ಹೇಳಿದ್ದಾರೆ.

ಸಂತ್ರಸ್ತರ ಮನೆಗೆ ಕಾಂಗ್ರೆಸ್ ಮುಖಂಡರು ಭೇಟಿ
ರಾಜ್ಯ ಕಾಂಗ್ರೆಸ್ ಅಧ್ಯಕ್ಷರು, ರಾಜಸ್ಥಾನದ ಸಚಿವರಾದ ಮಮತಾ ಭೂಪೇಶ್, ಭಜನ್ ಲಾಲ್ ಜಾಟವ್ ಮತ್ತು ಗೋವಿಂದ್ ರಾಮ್ ಮೇಘವಾಲ್ ಅವರೊಂದಿಗೆ ಜಲೋರ್‌ನ ಸುರಾನಾ ಗ್ರಾಮದಲ್ಲಿ ಸಂತ್ರಸ್ತರ ಮನೆಗೆ ಭೇಟಿ ನೀಡಿದರು. ಘಟನೆಗೆ ಸಂತಾಪ ಸೂಚಿಸಿದ ಅವರು, ಕುಟುಂಬದವರಿಗೆ ಪಕ್ಷದ ಪರವಾಗಿ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೋತಾಸ್ರಾ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ 5 ಲಕ್ಷ ರೂಪಾಯಿಗಳ ಜೊತೆಗೆ ಪಕ್ಷದ ರಾಜ್ಯ ಘಟಕವು ಆರ್ಥಿಕ ನೆರವು ನೀಡಲಿದೆ ಎಂದು ತಿಳಿಸಿದರು.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾಯಕ ರಾಹುಲ್ ಗಾಂಧಿ ಅವರು ಕುಟುಂಬವನ್ನು ಭೇಟಿ ಮಾಡಲು ಮತ್ತು ಕುಟುಂಬಕ್ಕೆ ಸಹಾಯ ಮಾಡಲು ಏನು ಮಾಡಬೇಕೆಂದು ನಾಯಕರು ಮತ್ತು ಶಾಸಕರಿಗೆ ಸೂಚಿಸಿದ್ದಾರೆ” ಎಂದು ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ ಶೀಘ್ರ ವಿಚಾರಣೆ ನಡೆಸಲಾಗುವುದು ಎಂದು ದೋತಾಸ್ರಾ ತಿಳಿಸಿದ್ದಾರೆ. ಈಗಾಗಲೇ ಖಾಸಗಿ ಶಾಲೆಗೆ ನೋಟಿಸ್ ಜಾರಿ ಮಾಡಲಾಗಿದ್ದು, ಶಾಲೆಯ ಪರವಾನಿಗೆ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದರು.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

ರಾಜೀನಾಮೆ ಪತ್ರಗಳನ್ನು ಕಳುಹಿಸಿದ 12 ಕಾಂಗ್ರೆಸ್ ಕೌನ್ಸಿಲರ್‌ಗಳು
ಕಾಂಗ್ರೆಸ್ ನಾಯಕ ಮತ್ತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ಜಲೋರ್‌ಗೆ ತೆರಳಿ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ದಲಿತ ಸಮುದಾಯದ ನಂಬಿಕೆಯನ್ನು ಗೆಲ್ಲಲು ಬಲವಾದ ಸಂದೇಶವನ್ನು ನೀಡಬೇಕಾಗಿದೆ ಎಂದು ಹೇಳಿದರು.
ಏತನ್ಮಧ್ಯೆ, ಬರಾನ್ ನಾಗರಿಕ ಸಂಸ್ಥೆಯಲ್ಲಿನ 25 ಕಾಂಗ್ರೆಸ್ ಕೌನ್ಸಿಲರ್‌ಗಳ ಪೈಕಿ 12 ಮಂದಿ ದಲಿತರು ಮತ್ತು ವಂಚಿತ ವರ್ಗಗಳ ಮೇಲಿನ ದೌರ್ಜನ್ಯದ ಬಗ್ಗೆ ದುಃಖ ವ್ಯಕ್ತಪಡಿಸಿದರು.
ಶಾಸಕ ಪನಾ ಚಂದ್ ಮೇಘವಾಲ್ ಅವರನ್ನು ಬೆಂಬಲಿಸಿ ಮತ್ತು ದಲಿತರ ರಕ್ಷಣೆಯಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದೇವೆ ಎಂದು ವಾರ್ಡ್ ನಂ 29 ಕೌನ್ಸಿಲರ್ ಯೋಗೇಂದ್ರ ಮೆಹ್ತಾ ಹೇಳಿದ್ದಾರೆ.
ರೋಹಿತಾಶ್ವ ಸಕ್ಸೇನಾ, ರಾಜಾರಾಮ್ ಮೀನಾ, ರೇಖಾ ಮೀನಾ, ಲೀಲಾಧರ್ ನಗರ್, ಹರಿರಾಜ್ ಎರ್ವಾಲ್, ಪಿಯೂಷ್ ಸೋನಿ, ಊರ್ವಶಿ ಮೇಘವಾಲ್, ಯಶವಂತ್ ಯಾದವ್, ಅನ್ವರ್ ಅಲಿ, ಜ್ಯೋತಿ ಜಾತವ್ ಮತ್ತು ಮಯಾಂಕ್ ಮಥೋಡಿಯಾ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದಾರೆ ಎಂದು ಅವರು ಹೇಳಿದರು.ಅವರು ಬುಧವಾರ ಕೋಟಾ ವಿಭಾಗೀಯ ಆಯುಕ್ತರಿಗೆ ತಮ್ಮ ರಾಜೀನಾಮೆ ಪತ್ರಗಳ ಪ್ರತಿಗಳನ್ನು ಸಲ್ಲಿಸಲಿದ್ದಾರೆ ಎಂದು ಮೆಹ್ತಾ ತಿಳಿಸಿದ್ದಾರೆ.
ಏತನ್ಮಧ್ಯೆ, ಕೋಟಾದ ಇಟಾವಾ ನಾಗರಿಕ ಸಂಸ್ಥೆಯ ನಾಮನಿರ್ದೇಶಿತ ಕೌನ್ಸಿಲರ್ ಸುರೇಶ್ ಮಹಾವರ್ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ಕಳುಹಿಸಿದ್ದಾರೆ.

ಪ್ರಮುಖ ಸುದ್ದಿ :-   ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement