ಶಿವಮೊಗ್ಗ ಗಲಭೆ ಪ್ರಕರಣ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗ: ನಗರದಲ್ಲಿ ಸೋಮವಾರ ಬಟ್ಟೆ ಅಂಗಡಿ ಕೆಲಸಗಾರ ಪ್ರೇಮ್ ಸಿಂಗ್‌ಗೆ ಚೂರಿ ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಮಾರ್ನಮಿಬೈಲು ನಿವಾಸಿ ಚರ್ಬಿ ಅಲಿಯಾಸ್ ಮೊಹಮ್ಮದ್ ಜಬಿ (30) ಗುಂಡೇಟು ತಿಂದ ಆರೋಪಿಯಾಗಿದ್ದಾನೆ.
ಪ್ರೇಮ್ ಸಿಂಗ್‍ಗೆ ಚೂರಿ ಇರಿದ ಪ್ರಕರಣದ ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಆರೋಪಿ ಜಬೀವುಲ್ಲಾ ಬಂಧಿಸಲು ಮಂಗಳವಾರ ನಸುಕಿನಲ್ಲಿ ಬಂಧಿಸಲು ತೆರಳಿತ್ತು. ಹೋದ ಪೊಲೀಸರ ಮೇಲೆ ಚಾಕು ತೋರಿಸಿ ಹಲ್ಲೆ ಮುಂದಾಗಿದ್ದಾನೆ ಎಂದು ಹೇಳಲಾಗಿದೆ. ನಂತರ ವಿನೋಬಾನಗರ ಠಾಣೆ ಪಿಎಸ್‍ಐ ಮಂಜುನಾಥ್ ಕುರಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ಅರೋಪಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಲತ್ರೆಗೆ ದಾಖಲಿಸಲಾಗಿದೆ.ಪ್ರೇಮ್ ಸಿಂಗ್ ಮೇಲೆ ಚೂರಿ ಇರಿತದ ಪ್ರಕರಣದಲ್ಲಿ ಈವರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ನಿನ್ನೆ (ಸೋಮವಾರ) ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್​ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್​ ಫ್ಲೆಕ್ಸ್‌ ವಿವಾದ ಭುಗಿಲೆದ್ದ ನಂತರ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿತ್ತು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ವೀರ್​ ಸಾವರ್ಕರ್​ ಅವರ ಫೋಟೋ ಅನ್ನು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ವಿವಾದಕ್ಕೆ ಕಾರಣವಾಯಿತು.
ಈ ವಿವಾದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ನಡುವೆಯೂ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಮನೆಗೆ ಹೊರಟಿದ್ದ ಪ್ರೇಮ್​ ಸಿಂಗ್​ ಮತ್ತು ಪ್ರವೀಣಕುಮಾರ್​ ಎಂಬವರಿಗೆ ಚಾಕುವಿನಿಂದ ಇರಿತ ಮಾಡಿದ ಘಟನೆಗಳು ನಡೆದಿವೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಪತ್ತೆ ಕಾರ್ಯ ನಡೆದಿದೆ ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25), ಜಬೀವುಲ್ಲಾ ಮತ್ತು ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪೈಕಿ ಜಬೀವುಲ್ಲಾ ಪೊಲೀಸರ ಮೇಲೆ ಹಲ್ಲೆ ಮಾಡಿ ಓಡಿಹೋಗಲು ಯತ್ನಿಸುತ್ತಿದ್ದಾಗ ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡೇಟು ಹಾಕಲಾಗಿದೆ. ಈತನಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದ್ದು, ಜೈಲಿನ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ ಎಂದು ಹೇಳಲಾಗಿದೆ.
ಶಿವಮೊಗ್ಗದಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 144 ಸೆಕ್ಷನ್ ಜಾರಿ ಹಿನ್ನೆಲೆ ಶಿವಮೊಗ್ಗ ಹಾಗೂ ಭದ್ರಾವತಿ ನಗರದ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ, ಕುವೆಂಪು ವಿವಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement