ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಎಲ್ಲ ಇಲಾಖೆಗಳಿಗೂ ವಿಸ್ತರಣೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಸರ್ಕಾರ ಕ್ರೀಡಾಪಟುಗಳಿಗೆ ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಈಗಾಗಲೇ 2% ರಷ್ಟು ಉದ್ಯೋಗ ಮೀಸಲು ನಿಗದಿ ಮಾಡಲಾಗಿದೆ. ಈಗ ಕ್ರೀಡಾಪಟುಗಳ ಉದ್ಯೋಗದ ಈ ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು, ಮಂಗಳವಾರ ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ ಕ್ರೀಡಾ ದತ್ತು ಯೋಜನೆಯಡಿಯಲ್ಲಿ ಆಯ್ಕೆಯಾಗಿರವ 75 ಕ್ರೀಡಾ ಪಟುಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ರೀಡಾಪಟುಗಳ ಜೀವನಕ್ಕೆ ಭದ್ರತೆ ಬೇಕು ಎಂಬುದನ್ನು ಸರ್ಕಾರ ಮನಗಂಡಿದೆ ಎಂದರು.

ಕ್ರೀಡಾ ದತ್ತು ಯೋಜನೆ ಜಾರಿಯಲ್ಲಿರುವ ಮೊಟ್ಟ ಮೊದಲ ರಾಜ್ಯ ಕರ್ನಾಟಕ. ಕ್ರೀಡಾಂಗಣಗಳ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ. ಬಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಎಂದು ಅಳವಡಿಸಿಕೊಳ್ಳುತ್ತಿದ್ದೇವೆ. ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಎರಡು ತಿಂಗಳೊಳಗೆ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗುತ್ತದೆ. ನಮ್ಮ ಸರ್ಕಾರ ಕ್ರೀಡೆ ಹಾಗೂ ಕ್ರೀಡಾಪಟುಗಳ ಕಲ್ಯಾಣಕ್ಕೆ ಆದ್ಯತೆ ನೀಡಿದೆ. ಯಾವುದನ್ನೂ ಚಿಂತೆ ಮಾಡದೆ ಧೈರ್ಯವಾಗಿ ಆಡಿ ಬನ್ನಿ. ಸರ್ಕಾರ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದರು.

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಲವಾರು ಕ್ರೀಡಾಪಟುಗಳಿದ್ದಾರೆ, ಒಲಂಪಿಯನ್ಸ್ ಇದ್ದಾರೆ, ಏಶಿಯ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಆಟವಾಡಿದವರಿದ್ದಾರೆ, ಈಜುಗಾರರಿದ್ದಾರೆ, ಅವರೆಲ್ಲರ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿ, ಪದಕ ಪಡೆದಿರುವವರು ಇತರರಿಗೆ ಪದಕ ಗೆಲ್ಲಲು ಸ್ಪೂರ್ತಿಯಾಗಬೇಕು. ಯಾರು ಭಾಗವಹಿಸಿದ್ದಾರೆ ಅವರು ತರಬೇತಿ ಪಡೆಯುತ್ತಿರುವವರಿಗೆ ಸ್ಪೂರ್ತಿಯಾಗಬೇಕು ಎಂದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement