ಆಗಸ್ಟ್‌ 19ರಿಂದ ಎಂ.ಬಿ. ಪಾಟೀಲ ರಾಜ್ಯ ಪ್ರವಾಸ : ಮಠ, ಮಸೀದಿ, ಚರ್ಚ್‌ಗಳ ಭೇಟಿ ಸಾಧ್ಯತೆ

posted in: ರಾಜ್ಯ | 0

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಆಗಸ್ಟ್‌ 19 ಶುಕ್ರವಾರದಿಂದ ಮೊದಲ ಹಂತದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಕಾಂಗ್ರೆಸ್‌ ಚುನಾವಣಾ ತಯಾರಿ ಆರಂಭಿಸಿದೆ.
2023ರ ವಿಧಾನಸಭೆ ಚುನಾವಣೆಗೆ ಪ್ರಚಾರ ಸಾರಥ್ಯ ವಹಿಸಿಕೊಂಡು ಸುಮಾರು 6 ತಿಂಗಳ ಬಳಿಕ ಎಂ.ಬಿ. ಪಾಟೀಲ್‌ ಅಖಾಡಕ್ಕೆ ಇಳಿದಿದ್ದು, ಪ್ರಚಾರ ಸಮಿತಿಯ ಕಚೇರಿಯನ್ನು ಮಂಗಳವಾರ ಉದ್ಘಾಟಿಸಿದ್ದಾರೆ. ಆಗಸ್ಟ್‌ 19 ರಿಂದ ವಿವಿಧ ಸಮುದಾಯಗಳ ಮತಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯಾದ್ಯಂತ ಮಠ-ಮಂದಿರಗಳು, ಮಸೀದಿ, ಚರ್ಚ್‌ಗಳ ಭೇಟಿಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಅಲ್ಲದೆ, ಹಲವು ಭಾಗಗಳಲ್ಲಿ ಪಕ್ಷದ ವತಿಯಿಂದ ನಡೆಯಲಿರುವ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ವಿವಿಧ ಸಮುದಾಯಗಳ ಪ್ರಮುಖರನ್ನು ಭೇಟಿ ಮಾಡಲಿದ್ದಾರೆ
ಆಗಸ್ಟ್‌ 19ರಂದು ಕಲ್ಯಾಣ ಕರ್ನಾಟಕ ಭಾಗದಿಂದ ತಮ್ಮ ಪ್ರವಾಸ ಆರಂಭಿಸಲಿರುವ ಅವರು, ಸೆಪ್ಟೆಂಬರ್‌ 10ರ ವರೆಗೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಚಾರ ಸಮಿತಿಯ ಪದಾಧಿಕಾರಿಗಳ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಟಿಪ್ಪು ಎಕ್ಸ್ ಪ್ರೆಸ್’ ರೈಲು ಹೆಸರು ಬದಲಿಸಿ ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಮರುನಾಮಕರಣ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement