ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಮನವಿ ಪತ್ರಗಳು ಬಂದಿದ್ದು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಜಾಗ ಕಂದಾಯ ಇಲಾಖೆಗೆ ಸೇರಿದ್ದರಿಂದ ಅಲ್ಲಿ ಏನು ಆಗಬೇಕು ಎಂದು ತೀರ್ಮಾನ ಮಾಡುವ ಅಧಿಕಾರ ಸರ್ಕಾರಕ್ಕಿದೆ ಎಂದು ತಿಳಿಸಿದರು.

75 ವರ್ಷದಲ್ಲಿ ಆ ಮೈದಾನದಲ್ಲಿ ಧ್ವಜ ಹಾರಿಸಿರಲಿಲ್ಲ ಈಗ ನಾನು ಕಂದಾಯ ಸಚಿವನಾದ ಬಳಿಕ ಮೊದಲ ಭಾರಿ ಧ್ವಜ ಹಾರಸಿದ್ದೇವೆ. ಇದಕ್ಕೆ ಅಲ್ಲಿನ ಸ್ಥಳಿಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ವೀರ ಸಾವರ್ಕರ ಫೋಟೊವನ್ನು ಮುಸ್ಲಿಮರ ಏರಿಯಾದಲ್ಲಿ ಹಾಕಿಸಿದ್ಯಾಕೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿದ ಅಶೋಕ, ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ, ಮುಸ್ಲಿಂ ಪ್ರದೇಶವೆಂದರೆ ಅದು ಪಾಕಿಸ್ತಾನಕ್ಕೆ ಸೇರಿದೆಯಾ ಅಥವಾ ಭಾರತಕ್ಕೆ ಸೇರಿದ್ದಾ ಎಂದು ಮರುಪ್ರಶ್ನಿಸಿದರು.
ಸಾವರ್ಕರ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದವರು ಎರಡು ಬಾರಿ ಕರಿನೀರಿನ ಶಿಕ್ಷೆಗೆ ಒಳಗಾದವರು, ಅಂಡಮಾನ್ ಜೈಲಿನಲ್ಲಿದ್ದವರು ಯಾರೂ ಬದುಕಿ ಬಂದಿಲ್ಲ, ಅಲ್ಲಿದ್ದವರು ಒಂದೋ ಕಾಯಿಲೆಯಿಂದ ಸಾಯುತ್ತಾರೆ ಇಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆ ಶಿಕ್ಷೆ ಅನುಭವಿಸಿದವರು ಸಾವರ್ಕರ ಎಂದು ಹೇಳಿದರು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement