ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲು, ವ್ಯಕ್ತಿ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಇರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಬಳಿಯ ದೇವಿಗದ್ದೆಯ ಸಂದೇಶ ಮಂಜುನಾಥ ನಾಯ್ಕ (೨೧) ಎಂದು ಗುರುತಿಸಲಾಗಿದೆ.

ಈ ವ್ಯಕ್ತಿ ೧೭ ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಸುಮಾರು ನಾಲ್ಕು ತಿಂಗಳುಗಳಿಂದ ಮನೆಯಲ್ಲಿಟ್ಟು ಕೊಂಡಿದ್ದ. ನಂತರ ಮದುವೆಯಾಗದೆ ಮೋಸ ಮೂಡಲು ಯತ್ನ ಮಾಡಿದಾಗ ಈ ವಿಷಯ ಹುಡುಗಿಯ ಮನೆಯವರಿಗೆ ಗೊತ್ತಾಗಿ ಅವರು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಲ್ಲದೆ ಈ ಹಿಂದೆ ಕೂಡ ಬೇರೊಬ್ಬ ಯುವತಿಗೂ ಇದೇ ತರಹ ಮಾಡಿ ನಂತರ ಮನೆಯಿಂದ ಹೊರಹಾಕಿದ್ದ ಎಂಬ ಆರೋಪ ಕೂಡ ಈ ವ್ಯಕ್ತಿ ಮೇಲಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement