ಚಿತ್ರೀಕರಣದ ವೇಳೆ ಖ್ಯಾತ ನಟ ನಾಸರ್‌ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹೈದರಾಬಾದ್: ಹೈದರಾಬಾದ್ ಪೊಲೀಸ್ ಅಕಾಡೆಮಿಯಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಜನಪ್ರಿಯ ಚಲನಚಿತ್ರ ನಟ ನಾಸರ್ ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳು ಚಿತ್ರದ ಚಿತ್ರೀಕರಣವು ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ಸುಹಾಸಿನಿ, ಮೆಹ್ರೀನ್ ಮತ್ತು ಶಿಯಾಜಿ ಶಿಂಧೆ ಅವರೊಂದಿಗೆ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ನಾಸಿರ್ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಚಿತ್ರೀಕರಣದ ವೇಳೆ ನಾಸರ್ ಮೆಟ್ಟಿಲುಗಳನ್ನ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಅವರ ಎಡಗಣ್ಣಿನ ಕೆಳಗೆ ಗಾಯವಾಗಿ ರಕ್ತಸ್ರಾವ ಕಾರಣವಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ದಕ್ಷಿಣ ಭಾರತದ ವಿಶಿಷ್ಟ ನಟ ಎಂದೇ ಖ್ಯಾತರಾದ ನಟ ನಾಸರ್ ಅವರು ಅನೇಕ ಪಾತ್ರಗಳಲ್ಲಿ ಅದ್ಭುತವಾಗಿ ಅಭಿನಯಸಿದ್ದಾರೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement