ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸುತ್ತಿಲ್ಲವೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಪರ ಕಾರ್ಯದರ್ಶಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ.

ಶಾಲೆಗಳಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನು ಮೂಡಿಸಬೇಕು. ಪ್ರತಿದಿನ ಮುಂಜಾನೆಯ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಿಸುವ ಸಂಪ್ರದಾಯವು ರಾಜ್ಯದ ಎಲ್ಲಾ ಶಾಲೆಗಳಲ್ಲಿ ರೂಢಿಯಲ್ಲಿದೆ. ಆದರೆ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ಹಾಡಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಬಗ್ಗೆ ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು (ಉತ್ತರ) ಹಾಗೂ ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು(ದಕ್ಷಿಣ) ರವರು ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಇದನ್ನು ಖಾತ್ರಿಪಡಿಸಿಕೊಂಡಿದ್ದಾರೆ. ಹೀಗಾಗಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement