200 ಕೋಟಿ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿ ಎಂದು ಹೆಸರಿಸಿದ ಇ.ಡಿ

ನವದೆಹಲಿ: ₹ 200 ಕೋಟಿ ಮೊತ್ತದ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ.
ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಈ ನಟಿಯನ್ನು ಆರೋಪಿ ಎಂದು ಹೆಸರಿಸಲಾಗಿದೆ.
ಸುಲಿಗೆ ಮಾಡಿದ ಹಣದ ಫಲಾನುಭವಿ ಜಾಕ್ವೆಲಿನ್ ಎಂದು ಇ.ಡಿ ಪತ್ತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಸುಕೇಶ್ ಚಂದ್ರಶೇಖರ್ ಸುಲಿಗೆಕೋರ ಎಂದು ಆಕೆಗೆ ತಿಳಿದಿತ್ತು ಎಂದು ಇ.ಡಿ ನಂಬಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈ ಹಿಂದೆ ಸುಕೇಶ್ ಆಕೆಗೆ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಕಳುಹಿಸಿದ್ದನ್ನು ಇ.ಡಿ ಪತ್ತೆ ಹಚ್ಚಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ಇದುವರೆಗೆ ನಟಿಯ 7 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಸುಕೇಶ್ ಚಂದ್ರಶೇಖರ್ ಜೊತೆಗಿನ ನಂಟಿನ ಆರೋಪದ ಮೇಲೆ ಇ.ಡಿ ಹಲವು ಬಾರಿ ಪ್ರಶ್ನಿಸಿತ್ತು.
ಮೂವತ್ಮೂರು ವರ್ಷದ ಸುಕೇಶ್ ಚಂದ್ರಶೇಖರನನ್ನು ಹಲವು ರಾಜ್ಯ ಪೊಲೀಸರು ಮತ್ತು ಮೂರು ಕೇಂದ್ರೀಯ ಏಜೆನ್ಸಿಗಳು – ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು 32 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ತನಿಖೆ ನಡೆಸುತ್ತಿದೆ.

ಇಂದಿನ ಪ್ರಮುಖ ಸುದ್ದಿ :-   ರೈಲ್ವೇ ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬದ ಸದಸ್ಯರ ವಿರುದ್ಧ ನ್ಯಾಯಾಲಯಕ್ಕೆ ಸಿಬಿಐ ಆರೋಪಟ್ಟಿ ಸಲ್ಲಿಕೆ

ಸ್ಪೂಫ್ ಕರೆಗಳ ಮೂಲಕ ದೆಹಲಿಯ ಉದ್ಯಮಿಯೊಬ್ಬರ ಪತ್ನಿಯಿಂದ ಸುಕೇಶ್ ಚಂದ್ರಶೇಖರ್ 215 ಕೋಟಿ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸುಕೇಶ್ ದೆಹಲಿಯ ಜೈಲಿನಲ್ಲಿದ್ದಾಗ, ಪ್ರಧಾನಿ ಕಚೇರಿ, ಕಾನೂನು ಸಚಿವಾಲಯ ಮತ್ತು ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಸಂತ್ರಸ್ತ ಮಹಿಳೆಯಿಂದ ಹಣ ವಸೂಲಿ ಮಾಡಿದ್ದಾನೆ ಎಂದು ಹೇಳಲಾಗಿದೆ. ಮಹಿಳೆಯ ಉದ್ಯಮಿ ಪತಿಗೆ ಜಾಮೀನು ದೊರಕಿಸಿಕೊಡುವುದಾಗಿ ಮತ್ತು ಅವರ ಔಷಧ ವ್ಯಾಪಾರವನ್ನು ನಡೆಸುವುದಾಗಿ ಸುಕೇಶ್ ದೂರವಾಣಿ ಕರೆಗಳಲ್ಲಿ ಹೇಳಿಕೊಂಡು ಹಣ ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ರಾಜಕಾರಣಿ ಟಿಟಿವಿ ದಿನಕರನ್ ಒಳಗೊಂಡ ಐದು ವರ್ಷಗಳ ವಂಚನೆ ಪ್ರಕರಣದಲ್ಲಿ ಸುಕೇಶ್ ಕೂಡ ಭಾಗಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಇ.ಡಿ ಸುಕೇಶ್‌ನನ್ನು ಬಂಧಿಸಿತ್ತು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement