ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

posted in: ರಾಜ್ಯ | 0

ಬೆಂಗಳೂರು: ರಾಜಧಾನಿಯಲ್ಲಿ ಒಂದೇ ಕುಟುಂಬದ ಮೂವರ ಶವ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಎಂದು ಗುರುತಿಸಲಾಗಿದೆ.
ಮಾರಣಾಂತಿಕ ರೋಗ ಎಂದು ತಿಳಿದು ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಹೇಳಲಾಗಿದೆ. ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಮಹೇಶ ಅವರ ಶವ ಮನೆಯ ರೂಮ್​​ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಮತ್ತೊಂದು ರೂಮ್​​ನಲ್ಲಿ ಜ್ಯೋತಿ ಹಾಗೂ ಮಗ ನಂದೀಶ್ ವಿಷ ಸೇವಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಮಹೇಶ ಅವರು ಕಳೆದ ಒಂದು ವಾರದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಹೊಟ್ಟೆನೋವು ತೀವ್ರವಾಗಿದ್ದರಿಂದ ಇಂದು ಆಸ್ಪತ್ರೆಗೆ ತೆರಳಿದ್ದರು, ವೈದ್ಯಕೀಯ ತಪಾಸಣೆ ವೇಳೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ ಎಂದು ಹೇಳಲಾಗಿದೆ. ಈ ವಿಷಯ ಗೊತ್ತಾದ ಮಹೇಶ ಅವರು ತನ್ನ ಸಾವಿನ ನಂತರ ತನ್ನ ಹೆಂಡತಿ, ಮಕ್ಕಳ ಜೀವನ ಕಷ್ಟ ಎಂದು ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಮಹೇಶ ತಾನು ಮಾಡಿದ್ದ ನಿರ್ಧಾರದಂತೆ ಮನೆಯ ಒಂದು ರೂಂನಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮತ್ತೊಂದು ರೂಮಿನ ಬೆಡ್ ಮೇಲೆ ಪತ್ನಿ ಹಾಗೂ ನಂದೀಶ್ ಶವವಾಗಿ ಪತ್ತೆಯಾಗಿದೆ. ಘಟನೆಯಲ್ಲಿ ಪತ್ನಿ ಹಾಗೂ ಮಗು ವಿಷ ಸೇವಿಸಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಕುರಿತು ಮಹೇಶ್ ಅರ್ಧ ಪುಟದ ಡೆತ್ ನೋಟ್‍ನಲ್ಲಿ ಆರೋಗ್ಯ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ದಸರಾ ಮೆರವಣಿಗೆ ವೇಳೆ ಪಾರಂಪರಿಕ ಮದರಸಾದಲ್ಲಿ ಪೂಜೆ, 9 ಜನರ ವಿರುದ್ಧ ಪ್ರಕರಣ ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement