ಸಿದ್ದರಾಮಯ್ಯ ಕಾರಿಗೆ ಘೇರಾವ್: ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ, ಕಾರಿನೊಳ ಸಾವರ್ಕರ್ ಫೋಟೋ ಹಾಕಿದರು

ಮಡಿಕೇರಿ : ಮಡಿಕೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್  ಹಾಕಿ ಘೋಷಣೆ ಕೂಗಿದ್ದಾರೆ
ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿ ಸಿದ್ದರಾಮಯ್ಯ ಅವರ ಕಾರಿಗೆ ಘೇರಾವ್‌ ಹಾಕಲು ಯತ್ನಿಸಿದ್ದಾರೆ.
ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದರಾಮಯ್ಯ , ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು.

ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ ಅಲ್ಲದೆ, ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಬಿಗಿ ಬಂದೋ ಬಸ್ತ್‌ ಏರ್ಪಡಿಸಿದ್ದರು ಹಾಗೂ ಸಿದ್ದರಾಮಯ್ಯ ಅವರ ಕಾರನ್ನು ತಡೆಯಲು ಅವಕಾಶ ನೀಡಲಿಲ್ಲ.
ಬಿಜೆಪಿಯ ಕೊಡಗು ಘಟಕ “ಗೋ ಬ್ಯಾಕ್ ಸಿದ್ದರಾಮಯ್ಯ” ಎಂಬ ಟ್ರೆಂಡ್ ಅನ್ನು ಪ್ರಾರಂಭಿಸಿದೆ ಮತ್ತು ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನನ ವಿದ್ಯಾರ್ಥಿ ಎಂದು ಕರೆದಿದೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement