ತರಗತಿಯಲ್ಲಿ ಹುಡುಗ-ಹುಡುಗಿಯರು ಒಟ್ಟಿಗೆ ಕುಳಿತು ಓದುವುದು ಅಪಾಯಕಾರಿ: ಕೇರಳ ಮುಸ್ಲಿಂ ಸಂಘಟನೆ ನಾಯಕನ ವಿವಾದಾತ್ಮಕ ಹೇಳಿಕೆ

ಕೋಝಿಕ್ಕೋಡ್ : ಕೇರಳ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಂ ಅವರು ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಶಾಲಾ ತರಗತಿಗಳಲ್ಲಿ ಹುಡುಗರು ಮತ್ತು ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುವುದು “ಅಪಾಯಕಾರಿ” ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.
ಇದು ಅಪಾಯಕಾರಿ. ಹುಡುಗಿಯರು ಮತ್ತು ಹುಡುಗರು ತರಗತಿಯಲ್ಲಿ ಒಟ್ಟಿಗೆ ಕುಳಿತುಕೊಳ್ಳುವ ಅವಶ್ಯಕತೆ ಏನು? ನೀವು ಅವರನ್ನು ಏಕೆ ಒತ್ತಾಯಿಸುತ್ತಿದ್ದೀರಿ ಅಥವಾ ಅಂತಹ ಅವಕಾಶಗಳನ್ನು ಸೃಷ್ಟಿಸುತ್ತಿದ್ದೀರಿ? ಇದು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಲಿಂಗ-ತಟಸ್ಥ ನೀತಿಗಳಿಂದ ವಿದ್ಯಾರ್ಥಿಗಳು ಅಧ್ಯಯನದಿಂದ ವಿಮುಖರಾಗುತ್ತಾರೆ ಎಂದು ಕೇರಳ ಸರ್ಕಾರದ ವಿರುದ್ಧ ಸಲಾಂ ಹರಿಹಾಯ್ದಿದ್ದಾರೆ.

ಲಿಂಗ ತಟಸ್ಥತೆಯು ಧಾರ್ಮಿಕ ವಿಷಯವಲ್ಲ, ಆದರೆ ನೈತಿಕ ಸಮಸ್ಯೆಯಾಗಿದೆ. ಸರ್ಕಾರವು ವಿದ್ಯಾರ್ಥಿಗಳ ಮೇಲೆ ಲಿಂಗ-ತಟಸ್ಥ ನೀತಿಯನ್ನು ಹೇರಲು ಪ್ರಯತ್ನಿಸುತ್ತಿದೆ. ಲಿಂಗ ತಟಸ್ಥತೆಯು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತದೆ. ಇದನ್ನು ಹಿಂಪಡೆಯಲು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದರು.
ಲಿಂಗ-ತಟಸ್ಥ ಸುಧಾರಣೆಗಳೊಂದಿಗೆ ಮಕ್ಕಳು “ದಾರಿ ತಪ್ಪುತ್ತಾರೆ” ಎಂದು ಅವರು ಹೇಳಿದರು.
ಈ ಹಿಂದೆ ಆಡಳಿತಾರೂಢ ಎಡಪಂಥೀಯ ಸರಕಾರಗಳು ಧಾರ್ಮಿಕ ಮೌಲ್ಯಗಳನ್ನು ನಾಶಪಡಿಸುವ ಉದಾರವಾದಿ ಸಿದ್ಧಾಂತವನ್ನು ಶಿಕ್ಷಣ ಸಂಸ್ಥೆಗಳಲ್ಲಿ ತರುತ್ತಿವೆ ಎಂದು ಮುಸ್ಲಿಂ ಸಂಘಟನೆಗಳು ಆರೋಪಿಸಿದ್ದವು.
ಈ ಹಿಂದೆ, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ‘ಲಿಂಗ-ತಟಸ್ಥ ಕಲ್ಪನೆಗಳನ್ನು ಹೇರುವ’ ಕ್ರಮದಿಂದ ಹಿಂದೆ ಸರಿಯುವಂತೆ ಮುಸ್ಲಿಂ ಸಂಘಟನೆಗಳು ಸರ್ಕಾರವನ್ನು ಕೋರಿದ್ದವು. ಎಡ ನೇತೃತ್ವದ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಉದಾರವಾದಿ ಸಿದ್ಧಾಂತವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವ ಮಧ್ಯೆ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement