ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಎಕೆ-47 ರೈಫಲ್​ಗಳ ಕಳ್ಳತನ

ಬೆಳಗಾವಿ: ಬೆಳಗಾವಿಯ ಇಂಡೋ ಟಿಬೆಟ್‌ ಗಡಿ ಪೋಲಿಸ್​ (ಐಟಿಬಿಪಿ) ತರಬೇತಿ ಕ್ಯಾಂಪಸ್ ಪ್ರದೇಶದಲ್ಲಿ ಎರಡು ಎಕೆ-47 ರೈಫಲ್​ಗಳು ಕಳ್ಳತನವಾಗಿದೆ ಎಂದು ವರದಿಯಾಗಿದ್ದು,  ಆತಂಕಕ್ಕೆ ಕಾರಣವಾಗಿದೆ.
ಬೆಳಗಾವಿ ತಾಲೂಕಿನ ಹಾಲಭಾವಿಯಲ್ಲಿರುವ ಐಟಿಬಿಪಿ ಕ್ಯಾಂಪಿನಲ್ಲಿ ಮಧುರೈನ 45ನೇ ಬೆಟಾಲಿಯನ್‌ ಪೊಲೀಸ್‌ ಪಡೆಯ ರಾಜೇಶಕುಮಾರ, ಸಂದೀಪ ಮೀನಾ ಎಂಬವರು ನಕ್ಸಲ್ ನಿಗ್ರಹ ದಳದ ತರಬೇತಿ ಪಡೆಯುತ್ತಿದ್ದರು. ಅವರಿಗೆ ಸೇರಿದ ಎರಡು ಎಕೆ-47 ರೈಫಲ್ ಕಳ್ಳತನವಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಐಟಿಬಿಪಿ ಅಧಿಕಾರಿಗಳು ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳಗಾವಿ ತಾಲೂಕಿನ ಹಾಲಭಾವಿಯಲ್ಲಿರುವ ಐಟಿಬಿಪಿಯಲ್ಲಿ ಎಕೆ-47 ಕಳ್ಳತವಾಗಿರುವ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಗುರುವಾರ ಐಟಿಬಿಪಿ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಸೂಕ್ಷ್ಮ ವಿಷಯವಾಗಿರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಉತ್ತನಾಧಿಕಾರಿಗಳು ಆಗಮಿಸಿದ್ದಾರೆ. ಪೊಲೀಸ್ ಇಲಾಖೆ ನೆರವಿನಿಂದ ವ್ಯಾಪಕವಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ರೈಫಲ್ ಪತ್ತೆಗಾಗಿ ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ‌ತಂಡ ರಚಿಸಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement