ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ವಯನಾಡ್ ಕಚೇರಿ ಇಬ್ಬರು ಸಿಬ್ಬಂದಿ ಸೇರಿ ನಾಲ್ವರ ಬಂಧನ

ವಯನಾಡ್: ಎರಡು ತಿಂಗಳ ಹಿಂದೆ ಭಾರತೀಯ ವಿದ್ಯಾರ್ಥಿ ಒಕ್ಕೂಟ (SFI) ಕಾರ್ಯಕರ್ತರ ಹಿಂಸಾತ್ಮಕ ಪ್ರತಿಭಟನೆ ವೇಳೆ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಇಬ್ಬರು ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಪೊಲೀಸರು ಶುಕ್ರವಾರ ಇಲ್ಲಿ ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನವನ್ನು ಪೊಲೀಸರು ದೃಢಪಡಿಸಿದರೆ, ಬಂಧಿತರಲ್ಲಿ ಇಬ್ಬರು ಇಲ್ಲಿನ ವಯನಾಡ್ ಸಂಸದರ ಕಚೇರಿಯ ಸಿಬ್ಬಂದಿ ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಜೂನ್ 24 ರಂದು ಎಸ್‌ಎಫ್‌ಐ ಕಾರ್ಯಕರ್ತರು ವಯನಾಡ್ ಸಂಸದರ ಕಚೇರಿಯನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಕಚೇರಿಯ ಗೋಡೆಯ ಮೇಲೆ ನೇತುಹಾಕಿದ್ದ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಹಾನಿ ಮಾಡಲಾಗಿತ್ತು ಎಂದು ಕಾಂಗ್ರೆಸ್ ಆರೋಪಿಸಿತ್ತು.

ಕಾಂಗ್ರೆಸ್ ಕಾರ್ಯಕರ್ತರು, ಎಸ್‌ಎಫ್‌ಐ ಕಾರ್ಯಕರ್ತರು ಗಾಂಧೀಜಿಯ ಭಾವಚಿತ್ರ ಧ್ವಂಸ ಮಾಡಿದ್ದಾರೆಂದು ವ್ಯಾಪಕ ಪ್ರಚಾರ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಎಸ್​​ಎಫ್​ಐ, ಕಾಂಗ್ರೆಸ್​ ಕಾರ್ಯಕರ್ತರೇ ರಾಷ್ಟ್ರಪಿತನ ಭಾವಚಿತ್ರಕ್ಕೆ ಹಾನಿ ಉಂಟು ಮಾಡಿದ್ದಾರೆಂಬ ಪ್ರತಿ ಆರೋಪ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು ಸಂಪೂರ್ಣ ತನಿಖೆ ನಡೆಸಿದ್ದರು.
ಆದರೆ,ತನಿಖೆಯ ವೇಳೆ ರಾಹುಲ್ ಗಾಂಧಿ ಅವರ ಪಿಎ ರತೀಶ್ ಕುಮಾರ್, ಸಂಸದರ ಕಚೇರಿ ಸಿಬ್ಬಂದಿ, ರಾಹುಲ್​​ ಎಸ್ ರವಿ, ಕಾಂಗ್ರೆಸ್ ಕಾರ್ಯಕರ್ತರಾದ ನೌಶಾದ್ ಮತ್ತು ಮುಜೀಬ್​ ಅವರು ಭಾವಚಿತ್ರ ಧ್ವಂಸ ಮಾಡಿದ್ದು ದೃಢಗೊಂಡಿದೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರತೀಶ್ ಸಾಕ್ಷಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement