ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ರಾಜ್ಯ ವಿಧಾನಸಭೆ ವಿಪಕ್ಷ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಸಂಬಂಧಿಸಿದಂತೆ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆಯಲಾಗಿತ್ತು.
ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರುತ್ತಿರುವ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.ನಂತರ ಅವರಿಗೆ ಜಾಮೀನು ಸಿಕ್ಕಿದೆ ಎಂದು ವರದಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement