ಹಿಸಾಬ್ ದೇನಾ ಪಡೇಗಾ’: ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ಟ್ವಿಟರ್‌ನಲ್ಲಿ ಜೀವ ಬೆದರಿಕೆ

ಮುಂಬೈ: ಆಗಸ್ಟ್ 14 ರಂದು ಟ್ವಿಟರ್ ಹ್ಯಾಂಡಲ್‌ನಿಂದ ಸಮೀರ್ ವಾಂಖೆಡೆಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಒಟ್ಟು ಎರಡು ಬೆದರಿಕೆ ಸಂದೇಶಗಳು ಬಂದಿದ್ದು, ಮೊದಲನೇ ಸಂದೇಶದಲ್ಲಿ, ವ್ಯಕ್ತಿ ತುಮ್ಕೋ ಪತಾ ಹೈ ತುಮ್ನೆ ಕ್ಯಾ ಕಿಯಾ ಹೈ, ಇಸ್ಕಾ ಹಿಸಾಬ್ ತುಮ್ಕೋ ದೇನಾ ಪಡೆಗಾ (ನೀವು ಏನು ಮಾಡಿದ್ದೀರಿ ಎಂದು ನಿಮಗೆ ತಿಳಿದಿದೆ ಮತ್ತು ನೀವು ಅದನ್ನು ಪಾವತಿಸಬೇಕಾಗುತ್ತದೆ) ಎಂದು ವ್ಯಕ್ತಿ ಸಂದೇಶದಲ್ಲಿ ಬರೆದಿದ್ದಾನೆ. ಮತ್ತೊಂದು ಸಂದೇಶದಲ್ಲಿ, “ತುಮ್ಕೋ ಖತಮ್ ಕರ್ ದೇಂಗೆ (ನಿಮ್ಮನ್ನು ಮುಗಿಸುತ್ತೇವೆ)” ಎಂದು ಜೀವ ಬೆದರಿಕೆ ಹಾಕಲಾಗಿದೆ.
‘ಅಮನ್’ ಹೆಸರಿನ ಟ್ವಿಟರ್ ಹ್ಯಾಂಡಲ್‌ನಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಹೇಳಲಾಗಿದ್ದು, ಇದರ ಬೆನ್ನಲ್ಲೇ ಸಮೀರ್ ವಾಂಖೆಡೆ ಗೋರೆಗಾಂವ್ ಪೊಲೀಸರನ್ನು ಸಂಪರ್ಕಿಸಿದ್ದು, ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ. ನಿನ್ನೆ ಸಮೀರ್‌ ವಾಂಖೆಡೆ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
ಖಾತೆಯು ಯಾವುದೇ ಸನುಯಾಯಿಗಳನ್ನು ಹೊಂದಿಲ್ಲ, ವಾಂಖೆಡೆಗೆ ಬೆದರಿಕೆ ಹಾಕುವ ಉದ್ದೇಶದಿಂದ ಈ ಖಾತೆಯನ್ನು ರಚಿಸಲಾಗಿದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

2021 ರ ಅಕ್ಟೋಬರ್‌ನಲ್ಲಿ ಮುಂಬೈ ಕ್ರೂಸ್‌ನಲ್ಲಿ ಡ್ರಗ್ಸ್ ವಿರೋಧಿ ಏಜೆನ್ಸಿಯ ಹೈ-ಪ್ರೊಫೈಲ್ ದಾಳಿಗಳ ನಂತರ ಎನ್‌ಸಿಬಿಯ ಮುಂಬೈ ಕಚೇರಿಯ ಮಾಜಿ ವಲಯ ನಿರ್ದೇಶಕ ವಾಂಖೆಡೆ ಬೆಳಕಿಗೆ ಬಂದಿದ್ದರು, ನಂತರ ಏಜೆನ್ಸಿಯು ಮುಂಬೈ ಕ್ರೂಸ್‌ ಮೇಲೆ ನಡೆದ ದಾಳಿಗಳಿಗೆ ಸಂಬಂಧಿಸಿದಂತೆ ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಮತ್ತು 19 ಜನ ಇತರರನ್ನು ಬಂಧಿಸಿತು. ಮತ್ತು ಕೆಲವು ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ಸಮೀರ್ ವಾಂಖೆಡೆ ವಿರುದ್ಧ ಭ್ರಷ್ಟಾಚಾರದ ಆರೋಪಗಳ ನಡುವೆ, ಪ್ರಕರಣವನ್ನು ಮುಂಬೈ ವಲಯದಿಂದ ಎನ್‌ಸಿಬಿಯ ಕೇಂದ್ರ ತಂಡಕ್ಕೆ ವರ್ಗಾಯಿಸಲಾಯಿತು. ವಾಂಖೆಡೆ ಅವರನ್ನು ಪ್ರಕರಣದಿಂದ ತೆಗೆದುಹಾಕಲಾಯಿತು ಮತ್ತು ಅವರ ವಿರುದ್ಧ ವಿಜಿಲೆನ್ಸ್ ತನಿಖೆಯನ್ನು ಪ್ರಾರಂಭಿಸಲಾಯಿತು. ನಂತರ ಎನ್‌ಸಿಬಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿತ್ತು.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

ವಾಂಖೆಡೆ ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದ ತನಿಖೆಯ ನೇತೃತ್ವ ವಹಿಸಿದ್ದಾಗ, ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರು ಸಮೀರ್‌ ವಾಂಕೆಡೆ ವಿರುದ್ಧ ತಮ್ಮ ಜಾತಿ ಪ್ರಮಾಣಪತ್ರ ನಕಲಿ ಮಾಡಿರುವುದು ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು.
IRS ಅಧಿಕಾರಿ, ವಾಂಖೆಡೆ ಅವರನ್ನು ಜೂನ್ 2020 ರಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಮರಣದ ನಂತರ NCB ಗೆ ನಿಯೋಜಿಸಲಾಯಿತು, ಸಂಭವನೀಯ ಡ್ರಗ್ಸ್ ತನಿಖೆಯ ಸಮಯದಲ್ಲಿ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳ ಹೆಸರುಗಳು ಕೇಳಿಬಂದವು.
ಅವರ ಅಧಿಕಾರಾವಧಿಯಲ್ಲಿ, ಬಾಲಿವುಡ್‌ನಲ್ಲಿ ಡ್ರಗ್ಸ್ ಸಂಬಂಧದ ಆರೋಪಗಳಿಗೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಾಕುಲ್‌ಪ್ರೀತ್ ಸಿಂಗ್ ಅವರಂತಹ ಹಲವಾರು ಪ್ರಸಿದ್ಧ ವ್ಯಕ್ತಿಗಳನ್ನು ಪ್ರಶ್ನಿಸಲಾಯಿತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement