ಧರ್ಮ ಒಡೆಯುವ ಉದ್ದೇಶವಿರಲಿಲ್ಲ : ರಂಭಾಪುರೀ ಶ್ರೀಗಳ ಮುಂದೆ ಸಿದ್ದರಾಮಯ್ಯ ಪಶ್ಚಾತ್ತಾಪ

ಚಿಕ್ಕಮಗಳೂರು: ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ, ಲಿಂಗಾಯತ ಧರ್ಮದ ವಿಚಾರದಲ್ಲಿ ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಮತ್ತೆ ಧರ್ಮದ ವಿಷಯಕ್ಕೆ ಕೈಹಾಕುವುದಿಲ್ಲ ಎಂದು ತಮ್ಮೆದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರೀ ಶ್ರೀಗಳು ಹೇಳಿದ್ದಾರೆ.
ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಶುಕ್ರವಾರ, ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೂ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ರಂಭಾಪುರಿ ಜಗದಗುರು ವೀರಸೋಮೇಶ್ವರ ಶ್ರೀಗಳ ಬಳಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಮನಸ್ಸಿನಲ್ಲಿರುವ ದುಗುಡವನ್ನು ನಮ್ಮೆದುರು ಮನಬಿಚ್ಚಿ ಮಾತನಾಡಿದರು. ಖಂಡಿತವಾಗಿ ನನಗೆ ಪಶ್ಚತ್ತಾಪವಾಗಿದೆ. ಧರ್ಮದ ವಿಚಾರದಲ್ಲಿ ನಾನೆಂದೂ ಪ್ರವೇಶ ಮಾಡುವುದಿಲ್ಲ ಎಂದು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರದ ಕುರಿತು ಹೇಳಿದ್ದಾರೆ ಎಂದು ಶ್ರೀಗಳು ತಿಳಿಸಿದರು.ಇನ್ನು ಮುಂದೆ ಯಾವತ್ತಿಗೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ. ರಾಜ್ಯ ಮತ್ತು ಜನರ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ಹೇಳಿದ್ದಾರೆ ಎಂದು ಶ್ರೀಗಳು ತಿಳಿಸಿದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಮಠಕ್ಕೆ ಸಿದ್ದರಾಮಯ್ಯ ಬಂದು ಹೋದ ಬಳಿಕ ಬಾಳೆಹೊನ್ನೂರು ಶ್ರೀಗಳು ಮಾತನಾಡಿ ಲಿಂಗಾಯತ ಧರ್ಮದ ವಿಚಾರದಲ್ಲಿ ನನ್ನ ದಾರಿ ತಪ್ಪಿಸಲಾಗಿದೆ . ಈಗ ಪಶ್ಚಾತ್ತಾಪವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಶ್ರೀಗಳು ಹೇಳಿದ್ದಾರೆ. ಸಿದ್ದರಾಮಯ್ಯ ಮೊಟ್ಟ ಮೊದಲ ಬಾರಿಗೆ ಮಠಕ್ಕೆ ಬಂದರು. ಪೀಠಕ್ಕೆ ಬಂದು ಆಶೀರ್ವಾದ ಪಡೆಯುವುದು ಅವರ ಬಯಕೆಯಾಗಿತ್ತು. ಅವರಿಗೆ ವೀರಶೈವ ಲಿಂಗಾಯತ ಧರ್ಮದ ಇತಿಹಾಸ, ಪರಂಪರೆ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದು ಶ್ರೀಗಳು ತಿಳಿಸಿದರು.
ಸಿದ್ದರಾಮಯ್ಯ ಕೊರಳಿಗೆ ಕಾಶಿಯಿಂದ ತರಿಸಿದ ರುದ್ರಾಕ್ಷಿ ಹಾರ ಹಾಕಿದ್ದಾರೆ. ಅಲ್ಲದೆ, ‘ಚುನಾವಣೆವರೆಗೂ ನಿಮ್ಮ ಕೊರಳಲ್ಲಿಯೇ ಇರಲಿ ನಿಮಗೆ ಒಳ್ಳೆಯದಾಗುತ್ತದೆ’ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಶ್ರೀಗಳು ಹೇಳಿದ್ದಾರೆ.
ಅದಕ್ಕೂ ಮುನ್ನ ಸಿದ್ದರಾಮಯ್ಯ ಶೃಂಗೇರಿಯ ಶಾರದಾಂಬೆ ದರ್ಶನ ಪಡೆದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement