ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮುಂದಿನ ಆದೇಶದ ವರೆಗೆ ಮುಂದುವರಿಯದಂತೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.
ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಅವರು ಸಲ್ಲಿಸಿರುವ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಕೆ ಎಸ್‌ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲು ಅರ್ಜಿದಾರರರಿಗೆ ಪೀಠವು ಆದೇಶ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್‌ 24ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಬೇಕಿದೆ ಎಂದು ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ವಾದಿಸಿದ್ದರು.ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಪ್ರೊ. ರವಿವರ್ಮ ಕುಮಾರ್‌, ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗುವುದು ಎಂದು ಪೀಠಕ್ಕೆ ತಿಳಿಸಿದ್ದರು.
ಪಂಚಮಸಾಲಿ ಉಪ ಪಂಗಡವನ್ನು 3ಬಿ ವಿಭಾಗದಿಂದ 2ಎ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರವು 2021ರ ಜುಲೈ 1ರಂದು ಆದೇಶ ಹೊರಡಿಸಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement