ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳನ್ನು ವಶಕ್ಕೆ ಪಡೆದ ಎನ್‌ಐಎ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರೆ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದೆ.
ಐವರು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಎಂಬವರನ್ನು ಎನ್‌ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಪ್ರವೀಣ್ ನೆಟ್ಟಾರು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಜುಲೈ 27ರಂದು ರಾತ್ರಿಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement