ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್‌ 22ರಿಂದ 24ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಹತ್ತು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್‌ 22ರಿಂದ 24ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಆಗಸ್ಟ್‌ 23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಮತ್ತು ಚಾಮರಾಜನಗರದಲ್ಲಿ ಆಗಸ್ಟ್‌ 24ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಟ್ಟದಲ್ಲಿ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement