ರಂಭಾಪುರಿ ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಆಗಿದ್ದನ್ನು ವಿವರಿಸಿದ್ದೇನೆ : ಸಿದ್ದರಾಮಯ್ಯ

ಹಾಸನ: ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಆದರೆ ಏನಾಯ್ತು ಎಂಬುದರ ಬಗ್ಗೆ ಅವರಿಗೆ ವಿವರಿಸಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ರಂಭಾಪುರಿ ಶ್ರೀ ಭೇಟಿಯಾಗಿದ್ದ ಸಿದ್ದರಾಮಯ್ಯ ಅವರು, ಧರ್ಮ ಒಡೆಯುವುದು ಉದ್ದೇಶವಾಗಿರಲಿಲ್ಲ. ನನ್ನನ್ನು ಕೆಲವರು ದಾರಿ ತಪ್ಪಿಸಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ, ಪಶ್ಚಾತಾಪ ಪಟ್ಟಿದ್ದಾರೆ ಎಂದು ಹೇಳಿದ್ದರು ಎಂಬುದು ಮಾಧ್ಯಮದಲ್ಲಿ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ನಾನು ಯಾವುದೇನೋವು ತೋಡಿಕೊಂಡಿಲ್ಲ,. ನಾವು ಲಿಂಗಾಯಿತ ಪ್ರತ್ಯೇಕ ಧರ್ಮದ ವಿಷಯದಲ್ಲಿ ಏನೇನು ಆಯಿತು, ಏನೇನು ಮಾಡಿದ್ದೇನೆ ಅಂತ ಹೇಳಿದ್ದೇನೆ. ಇದು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ. ಶ್ಯಾಮನೂರು ಶಿವಶಂಕರಪ್ಪ ಅವರು ವೀರಶೈವ ಧರ್ಮ ಮಾಡಿ ಅಂತ ಅರ್ಜಿ ಕೊಟ್ಟರು, ಅಂದಿನಿಂದ ಇದೆಲ್ಲ ಆರಂಭವಾಯ್ತು ಎಂದು ಹೇಳಿದರು.

ಬಿಜೆಪಿಯವರು ಹಿಂದುತ್ವದಲ್ಲಿ ನಂಬಿಕೆ ಇಟ್ಟು, ಕೋಮುವಾದದ ಅಜೆಂಡಾ ಇಟ್ಟುಕೊಂಡು ಎಲ್ಲವನ್ನೂ ಮಾಡುತ್ತಿದ್ದಾರೆ. ಹಿಂದೂ ರಾಷ್ಟ್ರ ಮಾಡಬೇಕೆಂಬುದು ಅವರ ಅಜೆಂಡಾ,. ಆದರೆ ಸಂವಿಧಾನ ಎಲ್ಲ ಧರ್ಮವನ್ನು ಸಮಾನಾಗಿ ಕಾಣಬೇಕು. ತಾರತಮ್ಯ ಮಾಡಬಾರದು ಎಂದು ಹೇಳುತ್ತದೆ. ಆದರೆ ಬಿಜೆಪಿಯವರು ತಾರತಮ್ಯ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವೀಣ ನೆಟ್ಟಾರು ಮನೆಗೆ ಹೋಗಿದ್ದರು. ಅವರು ಹೋಗಬೇಕು ಪರಿಹಾರವನ್ನು ಕೊಡಬೇಕು. ಅದರ ಬಗ್ಗೆ ನಮ್ಮ ಆಕ್ಷೇಪಣೆ ಇಲ್ಲ, ಆದರೆ ಆದರೆ ಮುಸಲ್ಮಾನರು ಸತ್ತಿದ್ದಾರಲ್ಲ ಅವರ ಮನೆಗೂ ಹೋಗಿ, ಪರಿಹಾರ ಕೊಡಬೇಕಲ್ಲ. ಸರ್ಕಾರದ ವತಿಯಿಂದ ಪರಿಹಾರ ಕೊಡುತ್ತಿರುವುದು. ಅದನ್ನು ಎಲ್ಲರಿಗೂ ಸಮಾನವಾಗಿ ಕೊಡಬೇಕು. ಅವರು ಯಾರೇ ಇರಲಿ ಎಲ್ಲರಿಗೂ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement