ಶಾಲಾ ಬಸ್ – ಗೂಡ್ಸ್ ವಾಹನದ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ : ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದಲ್ಲಿ ವಿದ್ಯಾರ್ಥಿನಿಯರಿದ್ದ ಶಾಲಾ ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅಥಣಿ ಪಟ್ಟಣದ ಬಣಜವಾಡ ಶಾಲೆಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಬಸ್‌ನಲ್ಲಿದ್ದ 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲಾ ವಾಹನದಲ್ಲಿ ಇಪ್ಪತ್ತು ವಿದ್ಯಾರ್ಥಿನಿಯರು ಇದ್ದರು ಎಂದು ಹೇಳಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement