ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಶಿಕ್ಷಣಾಧಿಕಾರಿ ವೃಂದದ ಬಡ್ತಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕೆಸಿಆರ್ ನಿಯಮದಡಿ ಶಿಕ್ಷಣಾಧಿಕಾರಿ ವೃಂದಕ್ಕೆ ಮುಂಬಡ್ತಿ ನೀಡಲು ಕೌನ್ಸಿಲಿಂಗ್ ದಿನಾಂಕವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಆಗಸ್ಟ್‌ 23ರಂದು ಬೆಳಿಗ್ಗೆ 10:30ಕ್ಕೆ ಬೆಂಗಳೂರಿನಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ 04-08-2022ರಂದು ಇಲಾಖಾ ಮುಂಬಡ್ತಿ ಸಮಿತಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಗ್ರೂಪ್-ಬಿ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಗ್ರೂಪ್-ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ 32ರಡಿ ಸ್ವತಂತ್ರ ಪ್ರಭಾರದಲ್ಲಿರಿಸಲು ಅನುವಾಗುವಂತೆ, ಕೌನ್ಸೆಲಿಂಗ್ ಮೂಲಕ ಭರ್ತಿ ಮಾಡಲು ಶೈಕ್ಷಣಿಕ ಆಡಳಿತ ಹಿತದೃಷ್ಠಿಯಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಈ ಕೌನ್ಸಿಲಿಂಗ್ ಪ್ರಕ್ರಿಯೆಗೆ ಅರ್ಹ ಅಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ದಿನಾಂಕ 23-08-2022ರಂದು ಬೆಳಿಗ್ಗೆ 10:30ಕ್ಕೆ ಶಿಕ್ಷಕರ ಸದನ, ಕೆಜಿ ರಸ್ತೆ, ಬೆಂಗಳೂರು ಇಲ್ಲಿ ನಡೆಯಲಿರುವ ಕೌನ್ಸಿಲಿಂಗ್ ಪ್ರಕ್ರಿಯೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಎಸ್‌ಐಆರ್‌ : ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ ; 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement