ಕೋರ್ಟ್‌ಗೆ ಪೊಲೀಸರು ಕರೆತಂದಿದ್ದ ಕೊಲೆ ಪ್ರಕರಣದ ಆರೋಪಿ ಯುವತಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ…!

ಧಾರವಾಡ : ಕೊಲೆ ಪ್ರಕರಣದ ವಿಚಾರಣೆಗಾಗಿ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಆರೋಪಿಯೊಬ್ಬರು ಸಮೀಪದ ಸತ್ತೂರಿನ ಲಾಡ್ಜ್‌ ಒಂದರಲ್ಲಿ ಯುವತಿ ಜೊತೆಗಿದ್ದ ಘಟನೆ ನಡೆದಿದೆ. ನಂತರ ಲಾಡ್ಡ್ ಮೇಲೆ ದಾಳಿ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಫ್ರೂಟ್ ಇರ್ಫಾನ್ ಕೊಲೆ ಪ್ರಕರಣದ ಆರೋಪಿ ಬಚ್ಚಾ ಖಾನ್‌ ಎಂಬಾತನನ್ನು ಬಳ್ಳಾರಿ ಕಾರಾಗೃಹದಲ್ಲಿ ಇಡಲಾಗಿತ್ತು. ವಿಚಾರಣೆಗೆಂದು ಆತನನ್ನು ಇಲ್ಲಿನ ನ್ಯಾಯಾಲಯಕ್ಕೆ ಶನಿವಾರ ಕರೆತಂದ ವೇಳೆ ಸತ್ತೂರು ಬಳಿಯ ಲಾಡ್ಜ್‌ನಲ್ಲಿ ಯುವತಿಯೊಂದಿಗೆ ಖಾಸಗಿ ಸಮಯ ಕಳೆಯಲು ಪೊಲೀಸರೇ ಆತನಿಗೆ ವ್ಯವಸ್ಥೆ ಮಾಡಿಕೊಟ್ಟಿರುವುದು ಬಯಲಾಗಿದೆ.

ಬಚ್ಚಾ ಖಾನ್ ಬರುವ ಮೊದಲೇ ಯುವತಿ ಲಾಡ್ಜ್ ಕೋಣೆಯೊಳಗಿದ್ದಳು. ಪೊಲೀಸರು ಆತನನ್ನು ಅಲ್ಲಿಗೆ ಕರೆತಂದು ಬಿಟ್ಟರು. ಈ ಖಚಿತ ಮಾಹಿತಿ ಆಧರಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್‌ ಮತ್ತು ಇತರ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು’ ಎಂದು ಹೇಳಲಾಗಿದೆ.ಆರೋಪಿಯನ್ನು ವಿದ್ಯಾಗಿರಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಈತನನ್ನು ಬಳ್ಳಾರಿ ಜೈಲಿನಿಂದ ಐವರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದಾರೆ. ಇದೀಗ ಅವರ ಮೇಲೆಯೂ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಅಲ್ಲದೆ, ಈತನಿಗೆ ಮತ್ತೆ ಯಾರು ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ಈ ಮಧ್ಯೆ ಬಳ್ಳಾರಿ ಪೊಲೀಸರ ಬೇಜವಾಬ್ದಾರಿತನ ಹಾಗೂ ಹಣದಾಸೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನೂ ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಪ್ರತಿ ಬಾರಿ ವಿಚಾರಣೆಗೆ ಬರುವಾಗ ಈತ ನಗರದ ಸುತ್ತಮುತ್ತಲಿನ ಲಾಡ್ಜ್‌ಗಳನ್ನು ಮೊದಲೇ ಕಾಯ್ದಿರಿಸಿ, ಖಾಸಗಿ ಸಮಯ ಕಳೆಯುತ್ತಿದ್ದ ಎಂಬ ಬಗ್ಗೆಯೂ ಮಾಹಿತಿಯನ್ನೂ ಪೊಲೀಸರು ಕಲೆ ಹಾಕಿದ್ದಾರೆ.
ಬಚ್ಚಾಖಾನ್ ಧಾರವಾಡದ ಕುಖ್ಯಾತ ರೌಡಿ ಫ್ರೂಟ್​ ಇರ್ಫಾನ್​​ನನ್ನು ಕೊಲೆ ಆರೋಪಿಯಾಗಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆದಿದೆ. ಇಲ್ಲದೆ ಹಲವಾರು ಕೊಲೆ-ಸುಲಿಗೆ ಆರೋಪಗಳನ್ನು ಎದುರಿಸುತ್ತಿದ್ದಾನೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement