ಬಿಜೆಪಿ ನಾಯಕ ಶಹನವಾಜ್‌ ಹುಸೇನ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸೂಚಿಸಿದ್ದ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಅತ್ಯಾಚಾರದ ಅರೋಪದ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಶಹನವಾಜ್‌ ಹುಸೇನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ದೆಹಲಿ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಪ್ರಯತ್ನ ನಡೆದಿದ್ದು ಪ್ರಕರಣವನ್ನು ತುರ್ತಾಗಿ ಪರಿಗಣಿಸುವಂತೆ ಕೋರಿ ಮಾಜಿ ಸಚಿವ ಶಹನವಾಜ್‌ ಹುಸೇನ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಯು ಯು ಲಲಿತ್‌, ಎಸ್‌ ರವೀಂದ್ರ ಭಟ್‌ ಮತ್ತು ಸುಧಾಂಶು ದುಲಿಯಾ ಅವರಿದ್ದ ತ್ರಿಸದಸ್ಯ ಪೀಠವು ವಿಚಾರಣಾ ನ್ಯಾಯಾಲಯದ ಮುಂದೆ ಇರುವ ಎಲ್ಲ ವಿಚಾರಣಾ ಪ್ರಕ್ರಿಯೆಯು ಸಹ ಪರಿಶೀಲನಾರ್ಹವಾಗಿದೆ ಎಂದು ಅಭಿಪ್ರಾಯಪಟ್ಟು ಅದಕ್ಕೂ ತಡೆ ನೀಡಿದೆ.
ಬಿಜೆಪಿ ನಾಯಕ ಸೈಯದ್ ಶಹನವಾಜ್ ಹುಸೇನ್ ವಿರುದ್ಧ ನೀಡಲಾದ ಅತ್ಯಾಚಾರ ದೂರೊಂದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಳ್ಳುವಂತೆ ದೆಹಲಿ ಹೈಕೋರ್ಟ್‌ ಇತ್ತೀಚೆಗೆ ಆದೇಶಿಸಿತ್ತು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement