ವಿಜಯಪುರ: ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೊ ಪ್ರತ್ಯಕ್ಷ, ಅಂಟಿಸಿದ್ದು ನಾನೇ ಎಂದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ

ವಿಜಯಪುರ: ವಿಜಯಪುರ ಜಿಲ್ಲೆಗೂ ಸಾವರ್ಕರ್ ವಿವಾದದ ಕಿಡಿ ವ್ಯಾಪಿಸಿದೆ. ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೊ ಅಂಟಿಸುವ ಮೂಲಕ ಜಿಲ್ಲೆಯಲ್ಲೂ ವಿವಾದ ತಾರಕಕ್ಕೆ ಏರುವಂತಾಗಿದೆ.
ನಗರದ ಜಲನಗರ ಪರಿಸರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ವೀರಸಾವರ್ಕರ್ ಫೋಟೋ ಅಂಟಿಸಲಾಗಿದೆ. ಭಾನುವಾರ ತಡರಾತ್ರಿ ಕಾಂಗ್ರೆಸ್ ಕಚೇರಿಯ ಪ್ರವೇಶ ದ್ವಾರ, ಕಿಟಕಿ ಹಾಗೂ ಗೋಡೆ ಸೇರಿದಂತೆ ವಿವಿಧ ಕಡೆಗಳ ಸಾವರ್ಕರ್ ಫೋಟೋ ಅಂಟಿಸಲಾಗಿದ್ದು, ವಿಷಯ ತಿಳಿಯುತ್ತಲೇ ಕಾಂಗ್ರೆಸ್ ಕಚೇರಿಗೆ ಆಗಮಿಸಿರುವ ಜಲನಗರ ಪೊಲೀಸರು, ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ನವರು ಸಾವರ್ಕರ್ ಫೋಟೋ ಸುಟ್ಟಿದ್ದರು. ಈ ಮೂಲಕ ವಿ.ಡಿ.ಸಾವರ್ಕರ್​​ಗೆ ಅಪಮಾನ ಮಾಡಿದ್ದಾರೆ. ಇಂಥ ವಿವಾದ ಸೃಷ್ಟಿಸುವ ಕೆಲಸ ಪದೇಪದೆ ಮಾಡುತ್ತಿದ್ದಾರೆ. ವಿವಾದ ಅಂತ್ಯಗೊಳಿಸಲು ಕಾಂಗ್ರೆಸ್‌ ಕಚೇರಿಯಲ್ಲಿ ನಾನೇ ಸಾವರ್ಕರ್ ಫೋಟೋ ಅಂಟಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಸಾವರ್ಕರ್ ಫೋಟೋ ಅಂಟಿಸಿದ್ದು ದೊಡ್ಡ ಅಪರಾಧವಲ್ಲ. ಸಾವರ್ಕರ್ ಬಗ್ಗೆ ಮಾತನಾಡುವುದನ್ನು ಇಲ್ಲಿಗೆ ನಿಲ್ಲಿಸಿದರೆ ಸರಿ, ಇಲ್ಲದಿದ್ರೆ ನಾಳೆ ಕಾಂಗ್ರೆಸ್‌ ನಾಯಕರ ಮನೆಗಳಿಗೆ ಫೋಟೋ ಅಂಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement