ಶಿರಾಳಕೊಪ್ಪದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ, ಅಂಗಡಿಗಳು ಬಂದ್‌

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ವಲಯಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಕ್ಷುಲ್ಲಕ ಕಾರಣಕ್ಕೆ ಸೋಮವಾರ ಗಲಾಟೆ ನಡೆದು ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿದೆ.
ವಲಯಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ಹೇಳಲಾಗಿದ್ದು, ಇದು ಎರಡು ಕೋಮುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ. ಬಿಗುವಿನ ವಾತವರಣ ನಿರ್ಮಾಣವಾದ ಬೆನ್ನಲ್ಲೇ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್‌ ಮಾಡಿಸಿದರು.

ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ವಲಯಮಟ್ಟದ ಕ್ರೀಡಾಕೂಟದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿತ್ತು.
ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿಯೇ ಎರಡು ಕೋಮಿನ ಯುವಕರ ನಡುವೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಗಲಾಟೆಯಲ್ಲಿ ಗಾಯಗೊಂಡವನನ್ನು ಶಿರಾಳಕೊಪ್ಪದ ಸಮೂದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿರಾಳಕೊಪ್ಪ ಪಟ್ಟಣ ಸಂಪೂರ್ಣ ಬಂದ್ ಆಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement