ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ಹೊಳಿಮಠ  (45) ಅವರು ಹೃದಯಾಘಾತದಿಂದ ಇಂದು ಸೋಮವಾರ ನಿಧನರಾಗಿದ್ದಾರೆ.
ಬೆಳಿಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದರು. ತಕ್ಷಣವೇ ಅವರನ್ನು ನಾಗರಬಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.  ಮುಖ್ಯಮಂತ್ರಿ ಬೊಮ್ಮಾಯಿ‌ ಅವರು ಗೃಹ ಸಚಿವರಾದಾಗಿಂದ ಅವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗ ಸ್ವಾಮಿ ಕೆಲಸ ಮಾಡುತ್ತಿದ್ದರು. ವಿವಿಧ ಸುದ್ದಿವಾಹಿನಗಳು ಹಾಗೂ ಮುದ್ರಣ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಾರಿತಪ್ಪಿ ಮಹಾರಾಷ್ಟ್ರ ತಲುಪಿದ್ದ ಹಾವೇರಿ ಜಿಲ್ಲೆಯ ವೃದ್ಧೆ ; ಗೂಗಲ್‌ ಸರ್ಚ್‌, ಚಾಟ್‌ಜಿಪಿಟಿ ನೆರವಿನಿಂದ ಮರಳಿ ಮನೆಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement