ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ ಸ್ಟಾಫ್​ ಸೆಲೆಕ್ಷನ್​ ಕಮಿಷನ್; ದ್ವಿತೀಯ ಪಿಯುಸಿ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್​ ಸೆಲೆಕ್ಷನ್​ ಕಮಿಷನ್ (Staff Selection Commission)​ ವಿವಿಧ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್​ ಸಿ ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಎಸ್​ಎಸ್​ಸಿ ಅಧಿಸೂಚನೆ ಹೊರಡಿಸಿದ್ದು, ದ್ವಿತೀಯ ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ವಿವಿಧ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಲು ಸೆಪ್ಟೆಂಬರ್​ 5 ಕೊಎನಯ ದಿನಾಂಕವಾಗಿದೆ.
ಸ್ಟೆನೋಗ್ರಾಫರ್ ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಿಲ್ಲ, ವೇತನ ಎಸ್​ಎಸ್​ಸಿ ನಿಯಮ ಅನುಸಾರ ನಡೆಯಲಿದೆ.

ಶೈಕ್ಷಣಿಕ ಅರ್ಹತೆ:
ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಅಧಿಕೃತ ಅಧಿಸೂಚನೆ ಅನುಸಾರ ಸ್ಟೆನೋಗ್ರಾಫರ್ (ಗ್ರೇಡ್ ಸಿ)ಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು.
ಅಧಿಕೃತ ಅಧಿಸೂಚನೆ ಅನುಸಾರ ಸ್ಟೆನೋಗ್ರಾಫರ್ (ಗ್ರೇಡ್ ಡಿ)ಗೆ ಅರ್ಜಿ ಸಲ್ಲಿಸುವವರು ಕನಿಷ್ಠ18 ಗರಿಷ್ಠ 27ವರ್ಷ ವಯೋಮಿತಿ ಹೊಂದಿರಬೇಕು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಮಹಿಳೆಯರು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳು, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಇತರ ಅಭ್ಯರ್ಥಿಗಳು 100 ರೂ.ಶುಲ್ಕ ಪಾವತಿಸಬೇಕಿದೆ. ಪಾವತಿಯನ್ನು ಆನ್‌ಲೈನ್/ಚಲನ್ ಮೂಲಕ ಮಾಡಬಹುದಾಗಿದೆ.
ಆಯ್ಕೆ ಪ್ರಕ್ರಿಯೆಯಲ್ಲಿಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಇರಲಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ -20 ಆಗಸ್ಟ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 05 ಸೆಪ್ಟೆಂಬರ್​ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ- 06 ಸೆಪ್ಟೆಂಬರ್​ 2022
ಆಫ್‌ಲೈನ್ ಚಲನ್ ಸಲ್ಲಿಸಲು ಕೊನೆಯ ದಿನಾಂಕ- 05ನೇ ಸೆಪ್ಟೆಂಬರ್ 2022

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

 ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್‌ನಲ್ಲಿದ್ದು ನೋಡಲು ಇಲ್ಲಿ ಕ್ಲಿಕ್ ಮಾಡಿ-notice_Steno_20082022
ಅಧಿಕೃತ ವೆಬ್‌ಸೈಟ್: ssc.nic.in
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಭರ್ತಿ ಮಾಡಿ.
ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement