ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

posted in: ರಾಜ್ಯ | 0

ಬೆಂಗಳೂರು: ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು, ಮಂಗಳವಾರ ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಖಾಸಗಿ ವ್ಯಕ್ತಿ ಸಲ್ಲಿಸಿರುವ ಮೇಲ್ಮನವಿಗೂ, ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ. ವರಿಷ್ಠರು ಆದೇಶ ನೀಡಿದ್ದಾರೆ ಹಾಗೂ ನಮ್ಮ ಪ್ರಣಾಳಿಕೆಯಲ್ಲಿಯೂ ನಾವು ಅದನ್ನು ಹೇಳಿದ್ದೇವೆ. ನಾವು ಈಗಲೂ ಅದೇ ನಿಲುವಿಗೆ ಬದ್ಧರಾಗಿದ್ದೇವೆ. ಹೈಕೋರ್ಟ್‌ ಆದೇಶವನ್ನು ಹೇಗೆ ಅನುಷ್ಠಾನಕ್ಕೆ ತರಬೇಕೆಂಬ ಪ್ರಕ್ರಿಯೆ ನಡೆದಿದೆ. ಹೀಗಾಗಿ ನಾವು ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಮೇಲ್ಮನವಿ ಸಲ್ಲಿಸಬಾರದೆಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಸಂದರ್ಭದಲ್ಲಿ ಬಂದರೆ ಇದೇ ನಿಲುವನ್ನು ಅಲ್ಲಿಯೂ ತಿಳಿಸುತ್ತೇವೆ ಎಂದರು.
ನಾನು ಹೋರಾಟ ಮಾಡುವಾಗ ಪ್ರತಿ ಸಾರಿಯೂ ಬಿಜೆಪಿ ಒಂದಲ್ಲ ಒಂದು ರೀತಿ ತಪ್ಪಿಸಲು ಪ್ರಯತ್ನ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು ಗೊಂದಲದಲ್ಲಿದ್ದಾರೆ. ಅವರ ಹೇಳಿಕೆಯಿಂದ ಎಲ್ಲಾ ಗೊಂದಲಗಳು ಆರಂಭವಾಗಿದೆ. ಸಾವರ್ಕರ್ ಅವರ ಚಿತ್ರವನ್ನು ಮುಸಲ್ಮಾನರ ಪ್ರದೇಶದಲ್ಲಿ ಹಾಕಬಾರದೆಂದು ಹೇಳಿ ಗೊಂದಲಗಳನ್ನು ಸೃಷ್ಟಿಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ನಾವು ಜವಾಬ್ದಾರರಲ್ಲ ಎಂದು ತಿಳಿಸಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಮೈಸೂರು ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement