ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ

ಹೈದರಾಬಾದ್: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ಇಂದು, ಮಂಗಳವಾರ ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ ವೀಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಗೋಶಾಮಹಲ್ ಬಿಜೆಪಿ ಶಾಸಕ ರಾಜಾ ಸಿಂಗ್ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸೋಮವಾರ ಮಧ್ಯರಾತ್ರಿ ಮತ್ತು ನಂತರ ಇಂದು, ಮಂಗಳವಾರ ಬೆಳಿಗ್ಗೆ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಮತ್ತು ಪಟ್ಟಣದ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ರಾಜಾ ಸಿಂಗ್ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ರಾಜಾ ಸಿಂಗ್ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು. ಬಶೀರ್ ಬಾಗ್‌ನಲ್ಲಿರುವ ಕಮಿಷನರ್ ಕಚೇರಿಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಹಲವು ಪೊಲೀಸ್ ಠಾಣೆಗಳಿಗೆ ಸ್ಥಳಾಂತರಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಓದಿರಿ :-   ಪ್ರಧಾನಿ ಮೋದಿ ಭೇಟಿ: ವರದಿಗಾರರ "ಕ್ಯಾರೆಕ್ಟರ್ ಸರ್ಟಿಫಿಕೇಟ್" ಕೇಳಿದ ಪೊಲೀಸರು..! ವ್ಯಾಪಕ ಟೀಕೆ ನಂತರ ಆದೇಶ ವಾಪಸ್

ಪ್ರತಿಭಟನೆಯ ನಡುವೆ ಕಳೆದ ವಾರ ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಹಾಸ್ಯನಟ ಮುನಾವರ್ ಫರುಕಿ ವಿರುದ್ಧದ ವೀಡಿಯೊದಲ್ಲಿ ಬಿಜೆಪಿ ಶಾಸಕ ಪ್ರವಾದಿ ಮೊಹಮ್ಮದ್ ಬಗ್ಗೆ ಕಾಮಿಡಿಯಾಗಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.
ಇದಕ್ಕೂ ಮೊದಲು, ರಾಜಾ ಸಿಂಗ್ ಅವರು ಫರುಕಿ ಅವರ ಕಾರ್ಯಕ್ರಮವನ್ನು ನಿಲ್ಲಿಸುವಂತೆ ಬೆದರಿಕೆ ಹಾಕಿದ್ದರು ಮತ್ತು ಸ್ಥಳದಲ್ಲಿದ್ದ ಸೆಟ್ ಅನ್ನು ಸುಟ್ಟುಹಾಕುವುದಾಗಿ ಎಚ್ಚರಿಸಿದ್ದರು. ನಂತರ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಹೈದರಾಬಾದ್‌ನಲ್ಲಿ ಹಾಸ್ಯನಟನ ಕಾರ್ಯಕ್ರಮ ನಡೆದ ಎರಡು ದಿನಗಳ ನಂತರ ರಾಜಾ ಸಿಂಗ್, ಇದನ್ನು “ಕಾಮಿಡಿ” ಎಂದು ಕರೆದಿದ್ದರು. ಅಲ್ಲದೆ, ಹಾಸ್ಯನಟ ಮುನಾವರ್ ಫರುಕಿ ಮತ್ತು ಅವರ ತಾಯಿಯನ್ನು ನಿಂದಿಸಿ ವೀಡಿಯಿ ಮಾಡಿದ್ದರು. ಅದರಲ್ಲಿ ಪ್ರವಾದಿ ಕುರಿತು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕರನ್ನು ಬಂಧಿಸಬೇಕೆಂದು ಒತ್ತಾಯಿಸಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅವರ ವೀಡಿಯೊ ಅನುಸರಿಸಿ, ಬಿಜೆಪಿ ಶಾಸಕನ ಹೇಳಿಕೆಗಾಗಿ ದಬೀರ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆಗಳು ಭುಗಿಲೆದ್ದ ನಂತರ ಇಂದು ಕೂಡ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
‘ಅವನು ಭಗವಾನ್ ರಾಮ ಮತ್ತು ಸೀತೆಯನ್ನು ನಿಂದಿಸುತ್ತಿದ್ದಾನೆ’ ಎಂದು ನನಗೆ ಅನಿಸಿದ್ದರಿಂದ  ನಾನು ಫರುಕಿ ಕುರಿತು ಕಾಮಿಡಿ ಮಾಡಿದ್ದೇನೆ ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ. ವೀಡಿಯೊದ ಕೊನೆಯಲ್ಲಿ, ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ ನಂತರ ರಾಜಾ ಸಿಂಗ್ ತಾವು ಏನು ಹೇಳಿದರೂ ಅದು ಕಾಮಿಡಿ ಎಂದು ಹೇಳಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   10 ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಘೋಷಿಸಿದ ಗೃಹ ಸಚಿವಾಲಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement