ಹುಬ್ಬಳ್ಳಿ: ಶಾಲಾ ವಾಹನದ ರೇಡಿಯೇಟರ್ ಬ್ಲಾಸ್ಟ್ ; ಕೆಲವು ಮಕ್ಕಳಿಗೆ ಗಾಯ

ಹುಬ್ಬಳ್ಳಿ: ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದ್ಯೊಯುವ ವಾಹನದ ರೇಡಿಯಟರ್  ಬ್ಲಾಸ್ಟ್ ನಾಲ್ಕೈದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಇಲ್ಲಿನ ಗೋಕುಲ ರಸ್ತೆ ಯ ಸೆಂಟ್ರಲ್ ಎಕ್ಸಾಯೀಜ್ ಕಾಲೋನಿಯಲ್ಲಿ ನಡೆದಿದೆ.
ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಖಾಸಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಸ್ಸು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ವ್ಯಾನ್‌ ಅನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪರಿಶೀಲನೆ ನಡೆಯುತ್ತಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement