35 ಸಾವಿರಕ್ಕೂ ಹೆಚ್ಚು ಹಾವು, ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿದ್ದ ಸ್ನೇಕ್ ಲೋಕೇಶ ನಿಧನ

ಬೆಂಗಳೂರು: ನೆಲಮಂಗಲದ ಸ್ನೇಕ್ ಲೋಕೇಶ ಎಂದು ಹೆಸರುವಾಸಿಯಾಗಿದ್ದ ಉರಗ ರಕ್ಷಕ, ಲೋಕೇಶ ಅವರು ಹಾವು ಕಡಿತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು, ಮಂಗಳವಾರ ಬೆಳಗ್ಗೆ ಸ್ನೇಕ್ ಲೋಕೇಶ ಅವರು ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಜುಲೈ 17ರಂದು ಬರಿಗೈಯಲ್ಲಿ ನಾಗರ ಹಾವನ್ನು ಹಿಡಿಯುವಾಗ‌ ಲೋಕೇಶ ಅವರ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು.

ತಕ್ಷಣವೇ ಅವರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಮಣಿಪಾಲ್‍ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ನೇಕ್ ಲೋಕೇಶ್ ಅವರು, 35 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಉರಗಗಳು, ಪ್ರಾಣಿ, ಪಕ್ಷಿಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು, ಕೆಲವು ಧಾರವಾಹಿ, ಕೆಲ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ನೆಲಮಂಗಲದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಅವರು ದುರದೃಷ್ಟವಶಾತ್ ಹಾವು ಕಡಿತದಿಂದ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement