ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ: ಹಳದಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಮೂರ್ನಾಲ್ಕು ದಿಮ ಮಳೆ ಜೋರಾಗಲಿದೆ ಎಂದು ತಿಳಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಲ್ಲಿ ಮಳೆ ಮುಂದುವರೆಯಲಿದ್ದು, ಆಗಸ್ಟ್​ 25ರವರೆಗೆ ಮೂರು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇಂದಿನಿಂದ (ಆಗಸ್ಟ್ 23) ಕರ್ನಾಟಕದಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಗೋವಾ, ಕೊಂಕಣ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಮಳೆ ಸುರಿಯುತ್ತಿದೆ. ಸಮುದ್ರದಲ್ಲಿ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವರೆಗೆ ಗಾಳಿ ಬೀಸಬಹುದಾಗಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 24ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಜನಾಕ್ರೋಶ ಸಭೆ ; 11 ನಿರ್ಣಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement