ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: ಪಿಯು ಕಾಲೇಜುಗಳ 778 ಹುದ್ದೆ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ  ಉಪನ್ಯಾಸಕರ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (PU College) ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 778 ವಿವಿಧ 10 ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಲಾಗಿದೆ.
ವಿಷಯವಾರು ಉಪನ್ಯಾಸಕರ ಖಾಲಿ ಹುದ್ದೆ ವಿವರ- ಕನ್ನಡ – 100 ಹುದ್ದೆ, ಇಂಗ್ಲಿಷ್‌ – 120, ಇತಿಹಾಸ – 120, ಅರ್ಥಶಾಸ್ತ್ರ – 180, ಭೂಗೋಳಶಾಸ್ತ್ರ – 20,
ವಾಣಿಜ್ಯ ಶಾಸ್ತ್ರ – 80, ಸಮಾಜಶಾಸ್ತ್ರ -75, ರಾಜ್ಯಶಾಸ್ತ್ರ – 75, ಮನಶಾಸ್ತ್ರ -02, ಗಣಕ ವಿಜ್ಞಾನ – 06 ಸೇರಿದಂತೆ ಒಟ್ಟು 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement