ತುಮಕೂರು: ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಒಂಬತ್ತು ಮಂದಿ ಸ್ಥಳದಲ್ಲೇ ಸಾವು

ತುಮಕೂರು: ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆಗಸ್ಟ್‌ 25) ಮುಂಜಾನೆ ನಡೆದಿದೆ. ಕ್ರೂಸರಿನಲ್ಲಿ 24 ಜನರಿದ್ದು, ಎಲ್ಲರೂ ರಾಯಚೂರು ಜಿಲ್ಲೆಯರು ಎಂದು ಹೇಳಲಾಗಿದೆ. ಗಾಯಾಳುಗಳನ್ನ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರ ಹೆಸರು ಊರಿನ ವಿವರಗಳನ್ನು ಪೊಲೀಸರು ಪಡೆಯುತ್ತಿದ್ದಾರೆ.

ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 9 ಜನ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.30 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಅದೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ ಓವರ್​​ ಟೇಕ್​ ಮಾಡಿ ಮುಂದೆ ಹೋಗುವಾಗ ಡಿಕ್ಕಿಯಾಗಿದೆ. ಕ್ರೂಸರ್​​ಗೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಾಹನದಲ್ಲಿ ಸಿರವರ, ಮಾನ್ವಿ , ರಾಯಚೂರು, ದೇವದುರ್ಗದವರು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು‌ ಮಾತನಾಡಿಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸುದ್ದಿಗಾರರೊಂದಿಗೆ ಮಾತನಾಡಿ, ಕ್ರೂಸರ್ ನಲ್ಲಿ ರಾಯಚೂರಿನ ನಾನಾ ತಾಲೂಕು, ಗ್ರಾಮ ದ 24 ಜನ ಇದ್ದರು. ಮೃತಪಟ್ಟವರಲ್ಲಿಇಬ್ಬರು ಮಕ್ಕಳಿದ್ದಾರೆ. ಒಟ್ಟು ಜನ 9 ಜನ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement