ನಿನ್ನೆ ನೇಮಕ ಮಾಡಿದ್ದ ಎಲ್ಲ 21 ಟ್ರಸ್ಟ್‌, ಪ್ರತಿಷ್ಠಾನಗಳ ನೇಮಕಾತಿ ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ನೇಮಿಸಿ ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದಲೇ ಹಿಂಪಡೆದಿದೆ.
ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ 9 ಮಂದಿಯನ್ನ ನೇಮಿಸಲಾಗಿದೆ. ಈ‌‌ ಪ್ರತಿಷ್ಠಾನದಲ್ಲಿ ಮೃತಪಟ್ಟಿರುವ ರಾಜೇಶ್ವರಿ ‌ಪೂರ್ಣಚಂದ್ರ ತೇಜಸ್ವಿ ಅವರನ್ನೂ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ರಾಜೇಶ್ವರಿ ಅವರು ಪೂರ್ಣಚಂದ್ರ ತೇಜಸ್ವಿ ಪತ್ನಿಯಾಗಿದ್ದು, ಅವರು ಮೃತಪಟ್ಟು 8 ತಿಂಗಳಾಗಿದೆ.

ಇನ್ನು ಶ್ರೀ ಗಳನಾಥ್ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಚಕ್ರವರ್ತಿ ಸೂಲಿಬೆಲೆ ಅವರು ತಿಸ್ಕರಿಸಿದ್ದಾರೆ. ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ನರೇಂದ್ರ ರೈ ದೇರ್ಲ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ್ದಾರೆ. ರಾಜ್ಯ ಸರ್ಕಾರದ ಸಂಸ್ಕೃತಿ ಇಲಾಖೆಗೆ ಕೋರಿಕೆ ಸಲ್ಲಿಸಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸದಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಎಲ್ಲಾ ಗೊಂದಲಗಳ ಬೆನ್ನಲ್ಲೇ ಇಡೀ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಗುರುವಾರ ಆದೇಶಿಸಿದೆ. ಎಲ್ಲಾ 21 ಟ್ರಸ್ಟ್‌ ಮತ್ತು ಪ್ರತಿಷ್ಠಾನಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಯನ್ನೂ ಹಿಂಪಡೆದಿದೆ.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್​ ಉಚ್ಚಾಟನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement