ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶವಿಲ್ಲ, ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್(High Court) ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಇಂದು(ಆಗಸ್ಟ್‌ 25)  ಮಧ್ಯಂತರ ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್ ಹಾಗೂ ರಂಜಾನ್ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶವಿದೆ. ಚಾಮರಾಜಪೇಟೆ ಈದ್ಗಾ ಜಾಗವನ್ನು ಆಟದ ಮೈದಾನವಾಗಿಯೂ ಬಳಕೆ ಮಾಡಲು, ಮೊದಲು ಇದ್ದಂತೆ ಯಥಾಸ್ಥಿತಿ ಕಾಯಲು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ಹೊರಡಿಸಿ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

ಆಸ್ತಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಪಕ್ಷಗಳಿಗೆ ನಿರ್ದೇಶಿಸಲಾಗಿದೆ ಮತ್ತು ಆಸ್ತಿಯನ್ನು ಆಟದ ಮೈದಾನದ ಉದ್ದೇಶಕ್ಕಾಗಿ ಮಾತ್ರ ಬಳಸಲಾಗುವುದು ಮತ್ತು ಮುಸ್ಲಿಂ ಸಮುದಾಯವು ಕ್ರಮವಾಗಿ ರಂಜಾನ್ ಮತ್ತು ಬಕ್ರೀದ್‌ನಲ್ಲಿ ಪ್ರಾರ್ಥನೆಗೆ ಬಳಸಲು ಮಾತ್ರ ಅನುಮತಿ ಇದೆಯೇ ಹೊರತು ಬೇರೆ ಯಾವುದೇ ದಿನ ಪ್ರಾರ್ಥನೆ ಸಲ್ಲಿಸಲು ಅಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದರು.

ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಇದಕ್ಕೆ ಈಗ ಹೈಕೋರ್ಟ್‌ ಈ ಆದೇಶದಿಂದ ಬ್ರೇಕ್ ಬಿದ್ದಿದೆ.
ಕೋರ್ಟ್‌ ಆದೇಶದ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರದಲ್ಲಿ ಹೈಕೋರ್ಟ್​ ಆದೇಶದಂತೆ ಯಥಾಸ್ಥಿತಿ ಕಾಪಾಡುತ್ತೇವೆ. ಗಣೇಶೋತ್ಸವ ಸಂಬಂಧ 7 ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಗಣೇಶೋತ್ಸವ ಬೇಡ ಎಂದು 2 ಸಂಘಟನೆ ಅರ್ಜಿ ಸಲ್ಲಿಸಿವೆ. ಹೈಕೋರ್ಟ್ ಆದೇಶ ಸಂಬಂಧ ಸರ್ಕಾರದ ಜತೆ ಚರ್ಚಿಸಿ ಹೈಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement