ಶಿರಾ ಬಳಿ ರಸ್ತೆ ಅಪಘಾತ : ಮೃತಪಟ್ಟ ಆರು ಜನರ ನೇತ್ರದಾನ ಮಾಡಿದ ಕುಟುಂಬಸ್ಥರು

posted in: ರಾಜ್ಯ | 0

ತುಮಕೂರು: ಇಂದು, ಗುರುವಾರ ಬೆಳಿಗ್ಗೆ ಜಿಲ್ಲೆಯ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಜನರ ಪೈಕಿ, 6 ಮಂದಿಯ ಕಣ್ಣುಗಳನ್ನು ದಾನ ಮಾಡಲಾಗಿದೆ. ಮೃತಪಟ್ಟವರ ಕುಟುಂಬದವರು 6 ಜನರ ನೇತ್ರದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಿರಾ ತಹಶೀಲ್ದಾರ್ ಮಮತಾ ಮಾಧ್ಯಮಗಳಿಗೆ ಹೇಳಿದ್ದಾರೆ.
ಕ್ರೂಸರ್‌ ಚಾಲಕ ಕೃಷ್ಣ, ಸುಜಾತಾ, ಪ್ರಭುಸ್ವಾಮಿ, ಸಿದ್ದಯ್ಯ ಸ್ವಾಮಿ, ನಿಂಗಣ್ಣ, ಮೀನಾಕ್ಷಿ ಎಂಬುವರ ನೇತ್ರದಾನ ಮಾಡಲಾಗಿದೆ. ಈ ಮೂಲಕ ಮೃತಪಟ್ಟವರ ಕುಟುಂಬದವರು ಸಾಮಾಜಿಕ ಕಳಕಳಿ ತೋರಿಸಿದ್ದಾರೆ. 6 ಜನರ ಕುಟುಂಬಸ್ಥರು ಸ್ವ-ಇಚ್ಛೆಯಿಂದ ಕಣ್ಣು ದಾನ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ತಹಶೀಲ್ದಾರರು ತಿಳಿಸಿದರು.
ಬೆಂಗಳೂರು ಹಾಗೂ ತುಮಕೂರಿನಲ್ಲಿ ವಿವಿಧಡೆ ಕೂಲಿ ಕೆಲಸ ಮಾಡುತ್ತಿದ್ದ ಇವರು ಕೊನೆ ಶ್ರಾವಣ ಶನಿವಾರದ ಪೂಜೆಗಾಗಿ ತಮ್ಮ ಗ್ರಾಮಗಳಿಗೆ ಬಂದು ವಾಪಸ್ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಆದರೆ, ಅಪಘಾತದಿಂದ 9 ಮಂದಿ ಮೃತಪಟ್ಟಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement