ಸರ್ಕಾರದಿಂದ ಎಡವಟ್ಟು : ಜೀವಂತವಾಗಿಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ…!

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್‌ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವಂತ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶಿಸಿತ್ತು. ಹೀಗೆ ನೇಮಕ ಮಾಡುವಾಗ ಚಿಕ್ಕಮಗಳೂರಿನ ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಸದಸ್ಯರ ಪಟ್ಟಿಯಲ್ಲಿ,  ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರನ್ನು ನೇಮಕ ಮಾಡಲಾಗಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಡವಟ್ಟಿ‌ನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಇದು ತಪ್ಪಾಗಿ ಸೇರ್ಪಡೆಯಾದ ಹೆಸರಾ ಅಥವಾ ಅದೇ ಹೆಸರಿನ ಬೇರೆಯವರಾ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಡವಟ್ಟಿ‌ನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಇದು ತಪ್ಪಾಗಿ ಸೇರ್ಪಡೆಯಾದ ಹೆಸರಾ ಅಥವಾ ಅದೇ ಹೆಸರಿನ ಬೇರೆಯವರದ್ದಾ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.

ಪ್ರಮುಖ ಸುದ್ದಿ :-   ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement