ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ: ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಹಾಗೂ ಇತರರ ಹತ್ಯೆ ಪ್ರಕರಣದ 11 ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮೂರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.
ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ-ಹತ್ಯೆ ಪ್ರಕರಣದ ಅಪರಾಧಿಗಳಿಗೆ ಕ್ಷಮಾಪಣೆ ನೀಡುವಾಗ ವಿಚಾರ ಮಾಡಿ ಅರ್ಜಿ ಸಲ್ಲಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಈ ವಿಷಯವನ್ನು ಎರಡು ವಾರಗಳ ನಂತರ ವಿಚಾರಣೆಗೆ ಮುಂದೂಡಿತು.
ಸ್ವಾತಂತ್ರ್ಯ ದಿನದಂದು 11 ಅಪರಾಧಿಗಳ ಶಿಕ್ಷೆ ಪ್ರಮಾಣ ತಗ್ಗಿಸಿ ಗುರಜರಾತ್‌ ಸರ್ಕಾರ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.ಸಿಪಿಐ (ಮಾರ್ಕ್ಸ್‌ವಾದಿ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮತ್ತು ಇನ್ನೊಬ್ಬ ಅರ್ಜಿದಾರರಿಂದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸೇರಿವೆ.
15 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಅಪರಾಧಿಗಳನ್ನು ಶಿಕ್ಷೆ ಕಡಿಮೆ ಮಾಡುವ ಉಪಕ್ರಮ ನೀತಿಯಡಿ ಬಿಡುಗಡೆ ಮಾಡಲಾಯಿತು.
ಆದಾಗ್ಯೂ, ಈ ಘಟನೆಯು ಭಾರೀ ರಾಜಕೀಯ ವಿವಾದಕ್ಕೆ ತಿರುಗಿತು.

ಪ್ರಮುಖ ಸುದ್ದಿ :-   ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ "ರಾಬರ್ಟ್ ವಾದ್ರಾ ಅಬ್ ಕಿ ಬಾರ್" ಪೋಸ್ಟರ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement