ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ್ ಅವರನ್ನು ಭೇಟಿಯಾದ ಆನಂದ್ ಶರ್ಮಾ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಅವರನ್ನು ಹಿಮಾಚಲ ಪ್ರದೇಶದ ಕಾಂಗ್ರೆಸ್ ಸ್ಟೀರಿಂಗ್ ಸಮಿತಿಯ ಮಾಜಿ ಅಧ್ಯಕ್ಷ ಆನಂದ್ ಶರ್ಮಾ ದೆಹಲಿಯಲ್ಲಿ ಭೇಟಿಯಾದರು.
ದೆಹಲಿಯ ಆಜಾದ್ ಅವರ ನಿವಾಸದಲ್ಲಿ ನಡೆದ ಭೇಟಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ಮೂಲಗಳು ಖಚಿತಪಡಿಸಿವೆ.
ಆಗಸ್ಟ್ 26ರಂದು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಆರ್‌.ಎಸ್. ಚಿಬ್ ಅವರೂ ಈ ಸಮಯದಲ್ಲಿ ಹಾಜರಿದ್ದರು.

ಕಾಂಗ್ರೆಸ್ ಪಕ್ಷದ ಜಿ23 ಸದಸ್ಯರಾಗಿದ್ದ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಚಾರ ಸಮಿತಿಯ ನಾಯಕತ್ವವನ್ನು ನಿರಾಕರಿಸಿದ ಕೆಲವು ದಿನಗಳ ನಂತರ ಹಿಮಾಚಲ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಸ್ಟೀರಿಂಗ್ ಕಮಿಟಿಯ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಶರ್ಮಾ ಸಹ ರಾಜೀನಾಮೆ ನೀಡಿದರು.
ಆಜಾದ್ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದ ಐದು ಪುಟಗಳ ಪತ್ರವು ಪಕ್ಷಕ್ಕೆ ಮುಜುಗರಕ್ಕೀಡು ಮಾಡುವಂತಿದೆ ಎಂಬುದನ್ನು ಗಮನಿಸಬಹುದು. ರಾಜೀನಾಮೆ ಪತ್ರದಲ್ಲಿ, ಆಜಾದ್ ಅವರು ಪಕ್ಷದಲ್ಲಿ ಬೆಳೆಯುತ್ತಿರುವ ಅಸಮಾದಾನವನ್ನು ನೇರವಾಗಿ ಎತ್ತಿ ತೋರಿಸಿದ್ದಾರೆ

ಪ್ರಮುಖ ಸುದ್ದಿ :-   ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ಮತ್ತೊಂದೆಡೆ, ಆನಂದ ಶರ್ಮಾ, ಹಿಮಾಚಲ ಪ್ರದೇಶದ ಪಕ್ಷದ ಸ್ಟೀರಿಂಗ್ ಕಮಿಟಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ತಾನು ಯಾವಾಗಲೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ ಮತ್ತು ಅಗತ್ಯವಿರುವಾಗ ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು. ಆದಾಗ್ಯೂ, ಅವರು ಪಕ್ಷದೊಳಗಿನ ಒಗ್ಗಟ್ಟಿನ ನಾಯಕತ್ವದ ಕೊರತೆ ಬಗ್ಗೆ ಮಾತನಾಡಿದ್ದಾರೆ. ಈಗ ಇವರಿಬ್ಬರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

2.3 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement