ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣ: ಮೈಸೂರಿನಲ್ಲಿ ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ದೂರು

ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಮೊರೆ ಹೋಗಿದ್ದರು.
ಒಡನಾಡಿ ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತು. ಮಕ್ಕಳ ಹೇಳಿಕೆಯ ನಂತರ ಸ್ವಾಮೀಜಿ ವಿರುದ್ದ ಪೋಕ್ಸೊ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿ ಆದೇಶ ನೀಡಿತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರಾಬಾದ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣಗಳನ್ನು ಆ ಜಿಲ್ಲೆಗೆ ವರ್ಗಾಯಿಸುವ ಸಾಧ್ಯತೆಯಿದೆ.

ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ವಿದ್ಯಾರ್ಥಿನೀಯರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಇಂತಹ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ಸಹ ದೂರು ನೀಡಲು ಹೆದರುತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗದ ಕಾರಣ ಮೈಸೂರಿನ ಒಡನಾಡಿ ಸಂಸ್ಥೆಗೆ ಬಂದು ದೂರು ನೀಡಿದ್ದೇವೆ ಎಂದು ವಿದ್ಯಾರ್ಥಿನೀಯರು ಹೇಳಿದ್ದಾರೆ. ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿತ್ತು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವದ ಬಗ್ಗೆ ಸಮಿತಿ ಮುಂದೆ ಹೇಳಿದ್ದರು.
ವಿಸ್ತೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಎಚ್.ಟಿ.ಕಮಲ ಅವರು ರಜೆ ಇದ್ದುದರಿಂದ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದರು.
ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ವಾರ್ಡನ್‌ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ. ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

4.2 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement