ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ: ಎರಡು ದಿನದಲ್ಲಿ ತೀರ್ಮಾನ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಇನ್ನೆರೆಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂಬಂಧ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜೊತೆ ಈ ವಿಚಾರದ ಬಗ್ಗೆ ಚರ್ಚಿಸಿದ ನಂತರ ಅವರ ಸೂಚನೆಯಂತೆ ಇಂದು ಕಂದಾಯ, ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ.

ಕೋರ್ಟ್ ಆದೇಶಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಬಳಿಯೂ ಮಾತನಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡು ಸೋಮವಾರ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ೫ ಅರ್ಜಿಗಳು ಬಂದಿವೆ. ಇದರಲ್ಲಿ ೨ ಅರ್ಜಿಗಳನ್ನು ಸ್ಥಳೀಯರು ಸಲ್ಲಿಸಿದ್ದಾರೆ. ಇನ್ನೂ ೨ ದಿನ ಅವಕಾಶವಿದೆ. ಹಾಗಾಗಿ, ಅರ್ಜಿ ಹಾಕುವವರು ಹಾಕಬಹುದು, ಕಂದಾಯ ಸಚಿವನಾಗಿ ನಂತರ ತೀರ್ಮಾನ ಪ್ರಕಟಿಸುತ್ತೇನೆ ಎಂದರು.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪೊಲೀಸರು ಬಂದೋಬಸ್ತ್ ಒದಗಿಸುವ ಬಗ್ಗೆ ಅವರ ಅಭಿಪ್ರಾಯವನ್ನೂ ತೆಗೆದುಕೊಳ್ಳಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement