ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನೂ ನಾಲ್ಕು ದಿನ ಇನ್ನೂ ಜೋರಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕೋಲಾರ, ಚಾಮರಾಜ ನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್‌ ನೀಡಲಾಗಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ.ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರಿನಲ್ಲಿ ಆಗಸ್ಟ್‌ 29ರಿಂದ 31ರ ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ, ಉಡುಪಿ ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ಬಳ್ಳಾರಿ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಗೆ ಆಗಸ್ಟ್‌ 30 ಮತ್ತು 31ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement