ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪ ಅಪ್ಪಟ ಸುಳ್ಳು, ಮಠದ ವಿರೋಧಿ ಶಕ್ತಿಗಳಿಂದ ಮಕ್ಕಳನ್ನು ದರ್ಬಳಕೆ ಮಾಡಿಕೊಂಡು ದೂರು: ವಕೀಲ ವಿಶ್ವನಾಥಯ್ಯ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮಾಡುತ್ತಿರುವ ಲೈಂಗಿಕ ದೌರ್ಜನ್ಯದ ಆರೋಪ ಅಪ್ಪಟ ಸುಳ್ಳು. ಪೀಠಾಧ್ಯಕ್ಷರಿಗೆ ಮಾನಸಿಕ ಕಿರುಕುಳ ನೀಡುವ ಉದ್ದೇಶದಿಂದಲೇ ಈ ಪ್ರಕರಣ ಹೆಣೆಯಲಾಗಿದೆ ಎಂದು ಮುರುಘಾ ಮಠದ ಸಲಹಾ ಸಮಿತಿಯ ಸದಸ್ಯ ಹಾಗೂ ವಕೀಲ ಎನ್.ಬಿ.ವಿಶ್ವನಾಥಯ್ಯ ಹೇಳಿದ್ದಾರೆ.
ಶನಿವಾರ ಸಲಹಾ ಸಮಿತಿಯ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಇಂತಹ ಆರೋಪ ಬಂದಿರುವುದು ಆಘಾತ ತಂದಿದೆ. ಭಕ್ತರು, ಹಲವು ಸಮಾಜದ ಮುಖಂಡರು ಶರಣರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ಈ ಆರೋಪವನ್ನು ಶರಣರು ಸಂಪೂರ್ಣ ತಳ್ಳಿಹಾಕಿದ್ದಾರೆ ಎಂದು ಹೇಳಿದರು. ದೂರಿನ ಪೂರ್ಣ ವಿವರ ನಮಗೆ ಗೊತ್ತಿಲ್ಲ. ಆರೋಪಗಳಿಂದ ಸ್ವಾಮೀಜಿಯವರಗೆ ತೀವ್ರ ನೋವಾಗಿದೆ. ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದರು.
ಮಠದ ವಿರೋಧಿ ಶಕ್ತಿ ಅತೀ ಆಸೆಯಿಂದ ಇಂಥ ಕೆಲಸ ಮಾಡಿಬಹುದು. ಮಕ್ಕಳನ್ನ ದುರ್ಬಳಕೆ ಮಾಡಿಕೊಂಡು ದೂರು ನೀಡಿದ್ದಾರೆ ಎನ್ನಬಹುದು. ಇದರ ಹಿಂದೆ ವಿರೋಧಿ ಶಕ್ತಿಗಳ ಕೈವಾಡ ಇದೆ ಎಂದು ತಿಳಿದು ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ ಎಂದು ವಕೀಲರಾದ ವಿಶ್ವನಾಥ ಹೇಳಿದರು.
ಶರಣರ ವಿರುದ್ಧ ಈವರೆಗೆ ಇಂತಹ ಆರೋಪ ಕೇಳಿ ಬಂದಿಲ್ಲ. ಮಕ್ಕಳು ಮತ್ತು ಮಹಿಳೆಯರ ಏಳಿಗೆಗೆ ಸ್ವಾಮೀಜಿ ಶ್ರಮಿಸಿದ್ದಾರೆ. ವಕೀಲರ ತಂಡವೊಂದು ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದೆ. ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಲಾಗಿದೆ. ಪೊಲೀಸರು ತನಿಖೆ ನಡೆಸಿ ಅಪರಾಧ ನಡೆದಿದ್ದು ನಿಜವಾದರೆ ಮಾತ್ರ ಬಂಧಿಸಲಿ. ಏಕಾಏಕಿ ದುಡುಕಿದರೆ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಕುರಿತು ಕಾನೂನು ಹೋರಾಟ ಮಾಡುತ್ತೇವೆ. ಅವರು ತಪ್ಪು ದೂರು ನೀಡಿದ್ದರೆ ದೇವರು ಅವರಿಗೆ ಬುದ್ಧಿ ನೀಡಲಿ. ತಪ್ಪಿನ ಅರಿವಾಗಿ ಅವರು ಕೇಸ್ ವಾಪಸ್ ಪಡೆಯಲಿ. ಎಲ್ಲಾ ಭಕ್ತ ವೃಂದದ ಪರವಾಗಿ ದೇವರಲ್ಲಿ ಪ್ರಾರ್ಥಿಸುವೆ ಎಂದರು.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

ಮಠದ ಅಧೀನದಲ್ಲಿರುವ ಹಾಸ್ಟೆಲ್‌ನಲ್ಲಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೈಸೂರು ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement