ರೈಲು ನಿಲ್ದಾಣದಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಕದ್ದು ಕಳ್ಳ ಪರಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೋ: ಮಥುರಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಏಳು ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಅಪರಾಧ ಸೆರೆಯಾಗಿದೆ.
ಈ ಘಟನೆಯ ವೀಡಿಯೋ ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನ್ನ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ವ್ಯಕ್ತಿ ಎಸ್ಕೇಪ್ ಆಗುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಮೊದಲಿಗೆ ಎಲ್ಲರೂ ಮಲಗಿರುವುದನ್ನು ಗಮನಿಸಿದ ವ್ಯಕ್ತಿ ಒಂದೆರಡು ಬಾರಿ ಸುತ್ತಲೂ ಓಡಾಡಿದ್ದಾನೆ. ನಂತರ ಮತ್ತೆ ಹಿಂದಿರುಗಿ ಬಂದು ಮಗುವನ್ನು ನಿಧನವಾಗಿ ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.
ಈಗ ನಾಪತ್ತೆಯಾಗಿರುವ ಮಗುವನ್ನು ಪತ್ತೆ ಹಚ್ಚಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಮಥುರಾ ಜೆಎನ್‍ನಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಿರುವುದಾಗಿ ಮಥುರಾ ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆರೋಪಿಯ ಫೋಟೋ ಸಹ ಬಿಡುಗಡೆ ಮಾಡಿದ್ದಾರೆ ಹಾಗೂ ಆತನ ಬಗ್ಗೆ ಮಾಹಿತಿ ಗೊತ್ತಾದರೆ ಪೊಲೀಸರಿಗೆ ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮಥುರಾ ಜೊತೆಗೆ ಉತ್ತರ ಪ್ರದೇಶದ ಅಲಿಗಢ್ ಮತ್ತು ಹತ್ರಾಸ್‍ನಲ್ಲಿ ರೈಲ್ವೇ ಪೊಲೀಸರು ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ದಸರಾ ಹಬ್ಬಕ್ಕೆ ರೈಲ್ವೆ ನೌಕರರಿಗೆ ಬೋನಸ್: 78 ದಿನಗಳ ವೇತನಕ್ಕೆ ಕೇಂದ್ರ ಸರ್ಕಾರ ಅನುಮೋದನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement