ಗೌರಿ-ಗಣೇಶನ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್‌ಗಳ ಸಂಚಾರ: ಟಿಕೆಟ್​ನಲ್ಲಿ ವಿಶೇಷ ಡಿಸ್ಕೌಂಟ್‌

ಬೆಂಗಳೂರು: ಗೌರಿ- ಗಣೇಶ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆಗೆ ವ್ಯವಸ್ಥೆ ಮಾಡಲಾಗಿದೆ.ಅಲ್ಲದೆ, ಈ ಬಾರಿ ಟಿಕೆಟ್​ ದರದಲ್ಲಿ ವಿಶೇಷ ರಿಯಾಯಿತಿಯನ್ನೂ ನೀಡಿದೆ.
ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್‌ 29 ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಹಾಗೂ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಆಗಮಿಸಲು ಆ 31ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ತಿಳಿಸಿದ್ದಾರೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ವಿಶೇಷ ಬಸ್ ಕಾರ್ಯಾಚರಿಸಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ,ಶಿರಸಿ, ಕಾರವಾರ. ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಕಾರ್ಯಾಚರಣೆ ನಡೆಯಲಿದೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುಗುತ್ತದೆ.
ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ನೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್‌ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೆಟ್‌ ಬುಕಿಂಗ್‌ ಅನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ 5 ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಿಯಾಯಿತಿ ನೀಡಲಾಗುತ್ತದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ ಸೈಟ್‌ ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗುತ್ತದೆ. • ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕ ಪ್ರಯಾಣಿಕರು ಪಾಲನೆ ಮಾಡಲು ಕೋರಲಾಗಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement